ಕೂಡಿಗೆ, ಡಿ. ೨೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೩-೨೪ನೇ ಸಾಲಿನ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಗ್ರಾಮಸ್ಥರು ಕಡಿಮೆ ಸಂಖ್ಯೆಯಲ್ಲಿ ಇರುವುದರಿಂದಾಗಿ ಗ್ರಾಮ ಸಭೆಯನ್ನು ಮುಂದೂಡುವAತೆ ಗ್ರಾಮಸ್ಥರರಾದ ಸಿ.ವಿ. ನಾಗೇಶ್, ಗೋವಿಂದರಾಜದಾಸ್ ಒತ್ತಾಯ ಮಾಡಿದರು. ಸ್ವಲ್ಪ ಸಮಯದ ನಂತರ ಗ್ರಾಮಸ್ಥರು ಸಭೆಗೆ ಅಗಮಿಸಿದ ನಂತರ ತಡವಾಗಿ ಸಭೆಯು ಆರಂಭಗೊAಡಿತು.
ಅಭಿವೃದ್ಧಿಗೆ ಪೂರಕವಾಗಿ, ಈಗಾಗಲೇ ಹಾಸನ ರಾಜ್ಯ ಹೆದ್ದಾರಿ ವಿಸ್ತರಣಗೊಳ್ಳುವ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡವನ್ನು ತೆರವುಗೊಳಿಸಲಾಗುವ ಹಿನ್ನೆಲೆಯಲ್ಲಿ ಬದಲಿ ಜಾಗವನ್ನು ಯಾವ ಪ್ರದೇಶದಲ್ಲಿ ಗುರುತಿಸಲಾಗಿದೆ ಎಂದು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕೆ.ವಿ. ಸಣ್ಣಪ್ಪ ಪ್ರಶ್ನಿಸಿದರು. ಅದಕ್ಕೆ ಕೂಡಿಗೆ ಕೃಷಿ ಕ್ಷೇತ್ರದ ಮುಖ್ಯದ್ವಾರದ ಸಮೀಪದ ಜಾಗವನ್ನು ಗುರುತಿಸಲಾಗಿ, ಈಗಾಗಲೇ ಜಿಲ್ಲಾಡಳಿತ ಮುಖೇನ ಪತ್ರ ವ್ಯವಹಾರ ಮಾಡಲಾಗಿದೆ. ಅದರ ನಿಯಮಾನುಸಾರ ಖಾತೆ ವರ್ಗಾವಣೆ ಸಂಬAಧಿಸಿದAತೆ ಶಾಸಕರ ಮತ್ತು ಉಸ್ತುವಾರಿ ಸಚಿವರ ಸಹಕಾರದೊಂದಿಗೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅಧ್ಯಕ್ಷ ಭಾಸ್ಕರ್ ನಾಯಕ್ ಮಾಹಿತಿ ನೀಡಿದರು.
ಹೆಚ್ಚು ರೋಗಿಗಳು ಬರುತ್ತಿರುವ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಬAಧಿಸಿದ ಖಾಯಂ ವೈದ್ಯರು ಸೇರಿದಂತೆ ಅಲ್ಲಿನ ಸ್ಟಾಫ್ ನರ್ಸ್ಗಳ ನೇಮಕಕ್ಕೆ ಅನೇಕ ಗ್ರಾಮ ಸಭೆಗಳಲ್ಲಿ ಚರ್ಚೆಗಳು ನಡೆದರೂ ಯಾವುದೇ ಕ್ರಮಗಳನ್ನು ಸಂಬAಧಿಸಿದ ಅರೋಗ್ಯ ಇಲಾಖೆಯವರು ಕೈಗೊಂಡಿರುವುದಿಲ್ಲ ಸಂಬAಧಿಸಿದAತೆ ಕ್ರಮಗಳನ್ನು ಕೈಗೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ಒತ್ತಾಯಿಸಿದರು. ಈಗಾಗಲೇ ರಾಜ್ಯ ಅರೋಗ್ಯ ಸಚಿವರು ಕೂಡಿಗೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿಯನ್ನು ಸಲ್ಲಿಸಲಾಗಿದೆ. ಮುಂದಿನ ಯೋಜನೆಯಲ್ಲಿ ಜಿಲ್ಲಾ ಮಟ್ಟದ ಅರೋಗ್ಯ ಇಲಾಖೆಯ ಅಧಿಕಾರಿಗಳು ಕ್ರಮಗಳನ್ನು ವಹಿಸಬೇಕಾಗಿದೆ ಎಂದು ಸಭೆಗೆ ಅಧ್ಯಕ್ಷರು ಮಾಹಿತಿಯನ್ನು ಒದಗಿಸಿದರು.
ಸಭೆಗೆ ಆಗಮಿಸಿದ್ದ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಸಂಪೂರ್ಣವಾದ ಮಾಹಿತಿ ನೀಡುವ ಸಂದರ್ಭದಲ್ಲಿ ತೋಟಗಾರಿಕೆಯ ಇಲಾಖೆಯ ಹನಿ ನೀರಾವರಿ, ಹಾಡಿಯ ವ್ಯಾಪ್ತಿಯ ಗ್ರಾಮಸ್ಥರಿಗೆ ವಿದ್ಯುತ್ ಒದಗಿಸುವ ಬಗ್ಗೆ, ವಿದ್ಯುತ್ ಕಂಬಗಳಲ್ಲಿ ಕೇಬಲ್ ವಯರ್ ಎಳೆದಿರುವ ಬಗ್ಗೆ ಮೀಸಲು ಅರಣ್ಯ ಇಲಾಖೆಯ ಜಾಗದಲ್ಲಿ ಅನಧಿಕೃತವಾಗಿ ಮನೆಗಳ ನಿರ್ಮಾಣ, ಹಾರಂಗಿ ಕುಶಾಲನಗರ ರಸ್ತೆಯ ನಿರ್ಮಾಣ ಸಂದರ್ಭದಲ್ಲಿ ಸಮರ್ಪಕವಾಗಿ ಚರಂಡಿ ವ್ಯವಸ್ಥೆ, ಕೆಲಸ ನಿರ್ವಹಣೆ ಮಾಡದಿರುವ ಬಗ್ಗೆ ಮತ್ತು ಹಿಂದಿನ ಅಭಿವೃದ್ಧಿ ಅಧಿಕಾರಿ ಚಿಕ್ಕತ್ತೂರು, ದೊಡ್ಡತ್ತೂರು ಗ್ರಾಮ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿ ನೆಪದಲ್ಲಿ ಲಕ್ಷಾಂತರ ರೂಗಳ ಅವ್ಯವಹಾರ ನಡೆದಿದೆ ಎಂದು ಸೇರಿದಂತೆ ಗ್ರಾಮದ ಅಭಿವೃದ್ಧಿಗೆ ಸಂಬAಧಿಸಿದAತೆ ಅನೇಕ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು.
ನೋಡಲ್ ಅಧಿಕಾರಿಯಾಗಿ ಸೋಮವಾರಪೇಟೆ ತಾಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕಾಳನಾಯಕ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಶಿಕಲಾ ಸೇರಿದಂತೆ ಸರ್ವ ಸದಸ್ಯರು, ಮತ್ತು ಅಭಿವೃದ್ಧಿ ಅಧಿಕಾರಿ ಸಂತೋಷ್ ಹಾಜರಿದ್ದರು. ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನೆರವೇರಿತು, ಕರ ವಸೂಲಿಗಾರ ಅವಿನಾಶ್ ವರದಿಯನ್ನು ವಾಚಿಸಿದರು. ಅಭಿವೃದ್ಧಿ ಅಧಿಕಾರಿ ಸಂತೋಷ್ ಸ್ವಾಗತಿಸಿ, ವಂದಿಸಿದರು.