ಮಡಿಕೇರಿ, ಡಿ. ೨೨: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬAಧ ಪ್ರವಾಸೋದ್ಯಮ ಇಲಾಖೆಯ ಆನ್‌ಲೈನ್ ಪೋರ್ಟಲ್‌ನಲ್ಲಿ ನೂತನವಾಗಿ ನೋಂದಣಿಗೊAಡಿರುವ ಹೋಂ-ಸ್ಟೇಗಳಿಗೆ ಶಾಸಕರಾದ ಡಾ. ಮಂಥರ್ ಗೌಡ ಅವರು ಮಂಗಳವಾರ ಕುಶಾಲನಗರದ ಶಾಸಕರ ಕಚೇರಿಯಲ್ಲಿ ಪ್ರಮಾಣ ಪತ್ರ ವಿತರಿಸಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಣಿಗೊಳ್ಳುವುದರ ಮುಖಾಂತರ ಉತ್ತಮ ಆದಾಯ ಗಳಿಸಲು ಮತ್ತು ಸುಸ್ಥಿರ ಮತ್ತು ಜವಾಬ್ದಾರಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೋರಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇ, ಹೊಟೇಲ್ ಮತ್ತು ರೆಸಾರ್ಟ್ಗಳು ಕೂಡ ನಿಯಮಗಳನ್ನು ಪಾಲಿಸಿ ಪ್ರವಾಸೋದ್ಯಮ ಇಲಾಖೆಯ ಕೆ.ಟಿ.ಟಿ.ಎಫ್ ಆನ್‌ಲೈನ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವAತೆ ಕರೆ ನೀಡಿದರು. ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಅನಿತಾ ಭಾಸ್ಕರ್ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಜತೀನ್ ಬೋಪಣ್ಣ ಇತರರು ಉಪಸ್ಥಿತರಿದ್ದರು.