ಬೆಂಗಳೂರು, ಡಿ. ೨೧: ರಾಜ್ಯದಲ್ಲಿ ಕೋವಿಡ್ ೧೯ ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಕೋವಿಡ್ನಿಂದಾಗಿ ಕಳೆದ ಮೂರು ದಿನಗಳಲ್ಲಿ ಮೂವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಚರ್ಚಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ.
ಕೋವಿಡ್ ೧೯ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಅದರಲ್ಲೂ ಎಓ.೧ ಎಂಬ ಹೊಸ ತಳಿಯ ವೈರಸ್ ಪತ್ತೆಯಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಜಾಗತಿಕವಾಗಿ ೫೧,೨೧೪ ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಪ್ರತಿದಿನ ಸರಾಸರಿ ೩೧೦ ಪ್ರಕರಣಗಳು ವರದಿಯಾಗುತ್ತಿವೆ. ಕರ್ನಾಟಕದಲ್ಲಿ ಪ್ರಸ್ತುತ ೯೨ ಂಛಿಣive ಅಔಗಿIಆ ಅಚಿses ವರದಿಯಾಗಿವೆ. ಕೇರಳದಲ್ಲಿ ೨೦೪೧, ತಮಿಳು ನಾಡಿನಲ್ಲಿ ೭೭, ಮಹಾರಾಷ್ಟçದಲ್ಲಿ ೩೫, ಗೋವಾದಲ್ಲಿ ೨೩ ಹಾಗೂ ಗುಜರಾತಿನಲ್ಲಿ ೧೨ ಂಛಿಣive ಛಿಚಿse ಇವೆ. ರಾಜ್ಯದಲ್ಲಿರುವ ಒಟ್ಟು ೯೨ ಂಛಿಣive ಅಔಗಿIಆ ಅಚಿse ಗಳಲ್ಲಿ ೮೦ ಬೆಂಗಳೂರು ನಗರದಲ್ಲಿ ಇದೆ. ಉಳಿದಂತೆ ಮೈಸೂರಿನಲ್ಲಿ ೫, ಬಳ್ಳಾರಿಯಲ್ಲಿ ೩, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ ೧ ಪ್ರಕರಣ ವರದಿಯಾಗಿವೆ. ಇವರಲ್ಲಿ ೭೨ ಮಂದಿ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. (ಊome Isoಟಚಿಣioಟಿ). ೨೦ ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಳು ಮಂದಿ ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ ೫೦೦೦ಕ್ಕೆ ಹೆಚ್ಚಿಸಲಾಗಿದೆ. ಇದರಲ್ಲಿ ೧೫೦೦ ಖಚಿಠಿiಜ ಂಟಿಣigeಟಿ ಖಿesಣ ಹಾಗೂ
(ಮೊದಲ ಪುಟದಿಂದ) ೩೫೦೦ ಖಖಿPಅಖ ಪರೀಕ್ಷೆಗಳಾಗಿವೆ. ಬೆಂಗಳೂರು ನಗರದಲ್ಲಿ ೧೦೦೦ ಪರೀಕ್ಷೆಗಳನ್ನು ನಡೆಸಲಾಗುವುದು. ಗಡಿ ಭಾಗಗಳಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುವುದು. ಕರ್ನಾಟಕದಲ್ಲಿ ಡಿಸೆಂಬರ್ ೧೫ ರಂದು ಒಂದು ಹಾಗೂ ಡಿಸೆಂಬರ್ ೨೦ ರಂದು ಎರಡು ಸಾವುಗಳು ಸಂಭವಿಸಿವೆ. ಈ ಮೂರು ಪ್ರಕರಣಗಳಲ್ಲಿ ಎಲ್ಲರೂ ಇತರ ಆರೋಗ್ಯ ಸಮಸ್ಯೆಗಳಿಂದ (ಅo-ಒoಡಿbiಜiಣಥಿ) ಬಳಲುತ್ತಿದ್ದರು. ಅದಾಗ್ಯೂ ಜನರು ಆತಂಕಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಾಗಿದೆ. ಕೋವಿಡ್ ೧೯ ಈಗ Pಚಿಟಿಜemiಛಿ ಆಗಿ ಉಳಿದಿಲ್ಲ. ಇಟಿಜemiಛಿ ಆಗಿದೆ. ಸರ್ಕಾರವೂ ಸಹ ಎಲ್ಲ ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಿದೆ. ಮೃತರಾದವರು, ಅo-moಡಿbiಜiಣಥಿ ಇರುವವರು, ಒಂದೇ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಪ್ರಕರಣಗಳು ವರದಿಯಾದ ಸಂದರ್ಭದಲ್ಲಿ, ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದವರ ಜಿನೋಮ್ ಸಿಕ್ವೆನ್ಸಿಂಗ್ ಮಾಡಲಾಗುತ್ತಿದೆ.
ತಾಂತ್ರಿಕ ಸಲಹಾ ಸಮಿತಿಯು ನೀಡಿರುವ ಸಲಹೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಅದರಂತೆ ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಯಿತು:
ಹಿಂದಿನ ಕೋವಿಡ್ ಅಲೆಗಳ ಸಂದರ್ಭದಲ್ಲಿ ನಡೆದ ತಪ್ಪುಗಳು ಈ ಬಾರಿ ಆಗಬಾರದು. ಆಕ್ಸಿಜನ್, ವೆಂಟಿಲೇಟರ್, ಬೆಡ್ಗಳು ಯಾವುದಕ್ಕೂ ತೊಂದರೆ ಆಗಬಾರದು. ಕಳೆದ ಬಾರಿ ತೊಂದರೆ ಆಗಿ ಹಲವಾರು ಜನ ಮೃತಪಟ್ಟರು. ಆಕ್ಸಿಜನ್ ಲಭ್ಯತೆಯನ್ನು ಖಾತರಿಪಡಿಸಬೇಕು. ಇದಕ್ಕೆ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸನ್ನದ್ಧವಾಗಿ ಇವು ಯಾವುದೂ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಬೇಕು. ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಕೋವಿಡ್ನ ಸಮರ್ಪಕ ನಿರ್ವಹಣೆ ಹಾಗೂ ಪಾರದರ್ಶಕತೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು. ಎಲ್ಲ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲಾಗಿದೆ. ಎಲ್ಲ ಆಸ್ಪತ್ರೆಗಳೂ ಕೋವಿಡ್ ಪ್ರಕರಣಗಳನ್ನು ನಿರ್ವಹಿಸಲು ಸಿದ್ಧತೆ ನಡೆಸಿಕೊಳ್ಳಲು ಸೂಚಿಸಲಾಗಿದೆ.
ಮಾರ್ಗಸೂಚಿಗಳು
೬೦ ವರ್ಷ ಮೇಲ್ಪಟ್ಟ ಎಲ್ಲರೂ, ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿ ಹಾಗೂ ಬಾಣಂತಿಯರು ಮಾಸ್ಕ್ ಧರಿಸಬೇಕು ಹಾಗೂ ಮುಚ್ಚಿದ, ಹೆಚ್ಚು ಗಾಳಿಯಾಡದ ಸ್ಥಳಗಳಿಗೆ ಹಾಗೂ ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡಬಾರದು. ಉಸಿರಾಟದ ಸಮಸ್ಯೆಯ ಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ನೆಗಡಿ ಇತ್ಯಾದಿಗಳಿಂದ ಬಳಲುತ್ತಿರುವವರು ಕೂಡಲೇ ವೈದ್ಯಕೀಯ ಸಮಾಲೋಚನೆ ನಡೆಸಿ ಮಾಸ್ಕ್ ಧರಿಸಬೇಕು. ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಅನಾರೋಗ್ಯ ಪೀಡಿತರಾದರೆ ಮನೆಯಲ್ಲೇ ಇರಬೇಕು ಹಾಗೂ ಇತರರೊಂದಿಗೆ ಸಂಪರ್ಕವನ್ನು ಕಡಿಮೆ ಮಾಡಬೇಕು. ಜನಸಂದಣಿಯ ಪ್ರದೇಶದಲ್ಲಿ ಮಾಸ್ಕ್ ಧರಿಸಬೇಕು. ವಿದೇಶ ಪ್ರವಾಸದ ಸಂದರ್ಭದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ಭಾರತ ಸರ್ಕಾರವೂ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೇರಳ ಮತ್ತು ತಮಿಳುನಾಡು ಗಡಿಭಾಗದಲ್ಲಿ ಜ್ವರದ ಪ್ರಕರಣಗಳ ಮೇಲೆ ನಿಗಾ ವಹಿಸಿ, ಪರೀಕ್ಷೆ ಮತ್ತು ವರದಿ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ. ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಸಿರಾಟದ ತೊಂದರೆ ಮತ್ತು ೨೦ ರಲ್ಲಿ ೧ ಜ್ವರ (IಐI)ದ ಪ್ರಕರಣಗಳಲ್ಲಿ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಲು ಸೂಚಿಸಿದೆ.