ವೀರಾಜಪೇಟೆ, ಡಿ. ೨೨: ತಾಲೂಕಿನ ಗಡಿಭಾಗದಲ್ಲಿರುವ ಮಲೆಯಾಳಂ ಶಾಲೆಯಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರಾಜಪೇಟೆ ತಾಲೂಕಿನ ಕ್ಲಸ್ಟರ್ಮಟ್ಟದ ಸಮಾಲೋಚನಾ ಸಭೆ ನಡೆಯಿತು.
ಗಡಿಭಾಗದಲ್ಲಿರುವ ಮಲೆಯಾಳಂ ಶಾಲೆಯಲ್ಲಿ ಇದೇ ಮೊದಲ ಬಾರಿಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ವೀರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್ನ ಶಿಕ್ಷಕರು ಪಾಲ್ಗೊಂಡಿದ್ದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಬಿಆರ್ಪಿ ಕೆ.ಸಿ. ಗೀತಾಂಜಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ಮಕ್ಕಳ ಕಲಿಕೆ ಹಾಗೂ ಪ್ರಗತಿಯ ಬಗ್ಗೆ ವಿವರಿಸಿದರು.
ಕಲ್ತೋಡ್ ಕ್ಲಸ್ಟರ್ನ ಸಿಆರ್ಪಿ ವಿ.ಟಿ. ವೆಂಕಟೇಶ್ ಹಾಗೂ ಅರಣ್ಯ ಇಲಾಖೆಯ ಸಂಪತ್ ಕುಮಾರ್ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಪ್ರಾಥಮಿಕ ಶಾಲೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಎ.ವಿ. ಮಂಜುನಾಥ್ ವಹಿಸಿ ಮಾತನಾಡಿ, ಮಲೆಯಾಳಂ ಶಾಲೆ ನಡೆದು ಬಂದ ಹಾದಿ ಸೇರಿದಂತೆ ಇನ್ನಿತರ ವಿಚಾರಗಳನ್ನು ತಿಳಿಸಿದರು.
ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ಸಜೇಶ್ ಕುಮಾರ್ ಸೇರಿದಂತೆ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಜರಿದ್ದರು.