ಮಡಿಕೇರಿ, ಡಿ. ೨೧ : ೨೦೨೪ರ ಹೊಸ ವರ್ಷಾಚರಣೆ ಸಂದರ್ಭ ಜಿಲ್ಲಾ ವ್ಯಾಪ್ತಿಯಲ್ಲಿ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ಗಳಲ್ಲಿ ರೇವ್ ಪಾರ್ಟಿ ನೆಪದಲ್ಲಿ ಮಾದಕ ವಸ್ತುಗಳ ಮಾರಾಟ, ಬಳಕೆ ಮಾಡುವುದಕ್ಕೆ ಹಾಗೂ ಅಬ್ಬರದ ಧ್ವನಿವರ್ಧಕವನ್ನು ಉಪಯೋಗಿಸುವುದಕ್ಕೆ ಪೊಲೀಸ್ ಇಲಾಖೆ ನಿಷೇಧ ಹೇರಿದೆ.
ಈ ಬಗ್ಗೆ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆ, ಹೊರಜಿಲ್ಲೆ, ಹೊರರಾಜ್ಯಗಳಿಂದ ¥್ರÀವಾಸದ ನಿಮಿತ್ತ ಆಗಮಿಸಿ ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ಗಳಲ್ಲಿ ತಂಗುವ ಪ್ರವಾಸಿಗರು ರೇವ್ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು, ಬಳಕೆ ಮಾಡುªÅÀದು ಕಂಡುಬAದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿ ಸಂಖ್ಯೆ ೦೮೨೭೨-೨೨೮೩೦೦ ಅಥವಾ ೯೪೮೦೮೦೪೯೦೦ಗೆ ಕರೆ ಮಾಡಿ ಸಾರ್ವಜನಿಕರು ಮಾಹಿತಿ ನೀಡುವಂತೆ ಮನವಿ ಮಾಡಿದೆ.
ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ಗಳ ಮಾಲೀಕರು ಓoise Poಟಟuಣioಟಿ (ಖeguಟಚಿಣioಟಿ ಚಿಟಿಜ ಅoಟಿಣಡಿoಟ) ಖuಟes-೨೦೦೦ ರ ಅನ್ವಯ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಯು ವಿಂಗಡಿಸಿರುವ ¥್ರÀದೇಶಗಳಲ್ಲಿ ನಿಗದಿಪಡಿಸಿರುವ ಡೆಸಿಬಲ್ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ ಅಥವಾ ಧ್ವನಿವರ್ಧಕಗಳನ್ನು ಉಪಯೋಗಿಸಬಾರದು ಹಾಗೂ ಪ್ರವಾಸಿಗರು ಬಳಸಲು ಯಾವುದೇ ರೀತಿಯ ಅವಕಾಶಗಳನ್ನು ನೀಡಬಾರದು.
ಹೋಂ ¸್ಟೆÃ, ರೆಸಾರ್ಟ್, ಲಾಡ್ಜ್ಗಳಲ್ಲಿ ನಿಷೇಧಿತ ಮಾದಕÀ ವಸ್ತುಗಳನ್ನು ಮಾರಾಟ ಸರಬರಾಜು, ಬಳಕೆ ಮಾಡುವುದು ಕಂಡುಬAದಲ್ಲಿ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ಗಳ ಮಾಲೀಕರು ಹಾಗೂ ಮಧ್ಯವರ್ತಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಮಾಹಿತಿ ನೀಡದೇ ಮಾದಕ ವಸ್ತುಗಳನ್ನು ಮಾರಾಟ, ಬಳಕೆ ಮಾಡಲು ಸಹಕರಿಸಿರುವುದು ಕಂಡುಬAದಲ್ಲಿ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ಗಳ ಮಾಲೀಕರು ಹಾಗೂ ಮಧ್ಯವರ್ತಿಗಳ ವಿರುದ್ಧ ಕಲಂ: ೨೫ ಎನ್ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ¥್ರÀಕರಣ ದಾಖಲಿಸಿ ಕಾನೂನು ಕ್ರಮಕೈಗೊಂಡು ಪರವಾನಗಿ ರದ್ದುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.