ಮಡಿಕೇರಿ, ಡಿ. ೨೩: ರಾಜ್ಯದ ೧ನೇ ತರಗತಿಯಿಂದ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ೨೦೨೩-೨೪ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶ(ಎಸ್ಎಸ್ಪಿ)ದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. ೩೧ ರವರೆಗೆ ಅವಧಿ ವಿಸ್ತರಿಸಲಾಗಿದೆ. ಎನ್ಎಸ್ಪಿಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಎಸ್ಎಸ್ಪಿ ಪೋರ್ಟಲ್ hಣಣಠಿs://ssಠಿ.ಠಿಡಿemಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಅಡಿಯಲ್ಲಿ ಅರ್ಜಿ ಸಲ್ಲಿಸುವುದು(ಪ್ರೆಶ್)ನಲ್ಲಿ ಕಡ್ಡಾಯವಾಗಿದ್ದು, ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ (ಎಸ್ಎಸ್ಪಿ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ/ಞoಜಚಿgu/ಠಿubಟiಛಿ ಅಥವಾ ಸಹಾಯವಾಣಿ ಸಂಖ್ಯೆ ೮೨೭೭೭೯೯೯೯೦ಗೆ ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಇವರನ್ನು ಹಾಗೂ ಕಚೇರಿ ದೂ. ೦೮೨೭೨-೨೨೫೫೨೮, ಮಾಹಿತಿ ಕೇಂದ್ರ, ಮಡಿಕೇರಿ ೦೮೨೭೨-೨೨೦೨೧೪, ಮಾಹಿತಿ ಕೇಂದ್ರ, ಸೋಮವಾರಪೇಟೆ ೮೫೪೮೦೬೮೫೧೯, ಮಾಹಿತಿ ಕೇಂದ್ರ, ಪೊನ್ನಂಪೇಟೆ ೯೯೦೦೭೩೧೦೩೭ನ್ನು ಸಂಪರ್ಕಿಸಬಹುದು.