ಮಡಿಕೇರಿ, ಡಿ. ೨೨: ವಿದ್ಯಾರ್ಥಿಗಳು ಸಾಹಿತ್ಯ ಅಧ್ಯಯನದ ಮುಖಾಂತರ ಸಾಹಿತ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡಲಿ ಎಂಬ ಉದ್ದೇಶದಿಂದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ರಾಷ್ಟçಕವಿ, ವಿಶ್ವ ಮಾನವ ಕುವೆಂಪು ಅವರ ಜನ್ಮದಿನದ ಅಂಗವಾಗಿ, ಕುಶಾಲನಗರ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಹಕಾರದೊಂದಿಗೆ ಕುಶಾಲನಗರ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ. ತಾ. ೩೦ ರಂದು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕುವೆಂಪು ಅವರ ಸಾಹಿತ್ಯ, ನಾಡು, ನುಡಿ, ಕಲೆ ವಿಷಯದ ಮೇಲೆ ರಸಪ್ರಶ್ನೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರಶಂಸನ ಪತ್ರ, ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಬಹುಮಾನ ಮತ್ತು ಫಲಕ ನೀಡಲಾಗುವುದು.
ಭಾಗವಹಿಸುವ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರಿAದ ಗುರುತಿನ ಪತ್ರ ತರಬೇಕು. ಒಂದು ಕಾಲೇಜಿನಿಂದ ತಲಾ ಮೂರು ವಿದ್ಯಾರ್ಥಿಗಳಿಗೆ ಭಾಗವಹಿಸುವ ಅವಕಾಶವಿರುತ್ತದೆ. ಸ್ಪರ್ಧಿಗಳು ತಾ. ೨೮ ರೊಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕಾಗಿದೆ. ನೋಂದಣಿ ಹಾಗೂ ಹೆಚ್ಚಿನ ಮಾಹಿತಿ ಗಾಗಿ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ (೯೯೮೦೯೮೮೧೨೩), ಸಂಚಾಲಕ ನಾಗೇಗೌಡ (೯೪೪೮೦೭೨೬೧೯) ಅವರು ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.