ಕಡAಗ, ಡಿ. ೨೨: ೨೦೨೪ ಜನವರಿ ೨೪ ರಂದು ಮಂಗಳೂರಿನ ಅಡ್ಯಾರ್‌ನಲ್ಲಿ ನಡೆಯಲಿರುವ ಎಸ್.ವೈ.ಎಸ್. ವಾರ್ಷಿಕ ಸಮ್ಮೇಳನದ ಅಂಗವಾಗಿ ಸಮಾವೇಶದ ಪ್ರಚಾರಾರ್ಥ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಲಮಾ ಸಂಗಮವು ಕೊಡಗು ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ಕೊಳಕೇರಿ ಅವರ ಅಧ್ಯಕ್ಷತೆಯಲ್ಲಿ ತಾ. ೧೮ ರಂದು ಕೊಂಡAಗೇರಿಯ ಶಾದಿ ಮಹಲ್‌ನಲ್ಲಿ ನಡೆಯಿತು.

ಕೂರ್ಗ್ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ ಉಸ್ತಾದರು ಉದ್ಘಾಟನೆ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಎಸ್‌ವೈಎಸ್ ರಾಜ್ಯಾಧ್ಯಕ್ಷ ಅಬ್ದುಲ್ ಹಫೀಳ್ ಸಅದಿ ಪ್ರಾಸ್ತಾವಿಕ ಭಾಷಣ ಮಾಡಿದರು. ವಿಪಿಎ ದಾರಿಮಿ ತಂಙ್ಞಳ್, ಆಟೀರಿ (ಕೇರಳ) ತರಗತಿ ನಡೆಸಿದರು. ಕಾರ್ಯಕ್ರಮದಲ್ಲಿ ಎಸ್‌ವೈಎಸ್ ಪ್ರಧಾನ ಕಾರ್ಯದರ್ಶಿ ಅಹ್ಮದ್ ಮುಸ್ಲಿಯಾರ್ ಸ್ವಾಗತಿಸಿ, ಅಬ್ದುಲ್ ಅಝೀಝ್ ಸಖಾಫಿ ವಂದಿಸಿದರು.