*ಗೋಣಿಕೊಪ್ಪ, ಡಿ. ೨೨: ಭಾರತ್ ಸೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸ್ಕೌಟ್ಸ್-ಗೈಡ್ಸ್, ರೋವರ್ಸ್ ರೇಂಜರ್ಸ್ಗಳಿಗೆ ನಡೆದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರವನ್ನು ಕೊಡಗಿನ ಮೂವರು ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ವೀರಾಜಪೇಟೆ ಎಸ್ಎಂಎಸ್ ಅಕಾಡೆಮಿ ಆಫ್ ಸೆಂಟ್ರಲ್ ಎಜುಕೇಷನ್ ಶಿಕ್ಷಣ ಸಂಸ್ಥೆಯಿAದ ಅನಾಮಿಕಾ ಟಿ. ಮತ್ತು ಗುಡ್ ಶೆಫರ್ಡ್ ಶಾಲೆಯಿಂದ ಎಂ.ಎ. ಮಧುಮಿತಾ, ಅನನ್ಯ ಅಕ್ಕಮ್ಮ ಎ.ಡಿ ಪುರಸ್ಕಾರ ಪಡೆದುಕೊಂಡರು.
ಮೂಡಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನ, ಸ್ವರಾಜ್ಯ ಮೈದಾನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡಬಿದಿರೆ ಸ್ಥಳಿಯ ಸಂಸ್ಥೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿ.ಯು.ಸಿ. ಪ್ರತಿಭಾನ್ವಿತ ಸ್ಕೌಟ್ಸ್-ಗೈಡ್ಸ್, ರೋವರ್ಸ್-ರೇಂಜರ್ಸ್ಗಳಿಗೆ ಅಭಿನಂದನಾ ಸಮಾರಂಭ ನಡೆಯಿತು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ರಾಜ್ಯ ಮುಖ್ಯ ಆಯುಕ್ತ ಪಿ.ಜಿ. ಆರ್. ಸಿಂಧ್ಯ, ರಾಜ್ಯ ಕಾರ್ಯದರ್ಶಿ, ಕೆ ಗಂಗಪ್ಪ ಗೌಡ, ಮೂಡಬಿದಿರೆ ವಿಧಾನ ಸಭಾ ಕ್ಷೇತ್ರ ಶಾಸಕ ಉಮಾನಾಥ ಎ. ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತ ಡಾ. ಎಂ. ಮೋಹನ್ ಆಳ್ವ, ಮಾಜಿ ಸಚಿವ ಅಭಯಚಂದ್ರ ಜೈನ್, ಉದ್ಯಮಿ ಕೆ. ಶ್ರೀಪತಿ ಭಟ್, ಬಿ.ವಿ. ರಾಮಲತಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯಣ್ಣ ಸಿ.ಡಿ., ಮೂಡಬಿದಿರೆ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್. ಕ್ಷೇತ್ರ , ಕೊಡಗು ಜಿಲ್ಲಾ ತರಬೇತಿ ಆಯುಕ್ತ ಮೈತಿಲಿರಾವ್ ಇದ್ದರು.