ಮಡಿಕೇರಿ, ಡಿ. ೨೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಸಂತ ಮೈಕಲರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶನಿವಾರಸಂತೆ ಬಳಿಯ ಹಂಡ್ಲಿ ಸರಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಕೆ. ಸೃಷ್ಟಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಈಕೆ ಹೆಬ್ಬುಲುಸೆ ಗ್ರಾಮದ ಕುಮಾರ್ ಹಾಗೂ ಕಾವ್ಯ ಕುಮಾರ್ ಅವರ ಪುತ್ರಿ. ಅಲ್ಲದೆ, ಇದೇ ಶಾಲೆಯ ೯ನೇ ತರಗತಿ ವಿದ್ಯಾರ್ಥಿನಿ ಅನುಶ್ರೀ ಆಶುಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾಳೆ. ಈಕೆ ಬೀಕಳ್ಳಿ ಗ್ರಾಮದ ಗೋಪಾಲ ಹಾಗೂ ಪೂರ್ಣಿಮ ದಂಪತಿಯ ಪುತ್ರಿ. ಶಾಲೆಯ ಕನ್ನಡ ಶಿಕ್ಷಕಿ ಮೀರಾ ಸುಮನ್ ಕ್ಯಾಸ್ತಲಿನ್ ಹಾಗೂ ಮುಖ್ಯ ಶಿಕ್ಷಕಿ ಪುಷ್ಪ ಅವರುಗಳ ಮಾರ್ಗದರ್ಶನದಲ್ಲಿ ಈ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.