ಬೆಂಗಳೂರು, ಡಿ. ೨೨: ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಹಿಜಾಬ್ ನಿಷೇಧಿಸಿತ್ತು. ಆದರೆ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲಾಗುವುದು. ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ, ಪರೀಕ್ಷೆ ಬರೆಯಲು ಹೋಗಬಹುದು ಎಂದು ತಿಳಿಸಿದರು.
ಉಡುಪು ಅವರವರ ಇಷ್ಟ. ಹಿಜಾಬ್ ನಿಷೇಧ ವಾಪಸ್ಗೆ ಹೇಳಿದ್ದೀನಿ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ ಆಧಾರದ ಮೇಲೆ ಜನರನ್ನು, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾವು ಅಂತಹ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಎಲ್ಲ ಜಾತಿ, ಎಲ್ಲಾ ಧರ್ಮದವರಿಗೆ ಮಾತ್ರವಲ್ಲ ಎಲ್ಲಾ ಪಕ್ಷದವರಿಗೂ ಅನುಕೂಲ ಆಗುವ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ.
ಬಿಜೆಪಿಯವರು ೧೦ ಕೆಜಿ ಅಕ್ಕಿ ಪಡೆಯುತ್ತಿಲ್ಲವಾ? ಬಿಜೆಪಿಯವರು ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿಲ್ಲವೇ? ಬಿಜೆಪಿಯವರು ಗೃಹಜ್ಯೋತಿ, ಗೃಹಲಕ್ಷಿö್ಮಯ ಹಣ ಪಡೆಯುತ್ತಿಲ್ಲವೇ? ನಮ್ಮ ಗ್ಯಾರಂಟಿ ಸ್ತಿçÃಗಳ ಲಾಭ ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದ ಅವರು, ಸುಳ್ಳು ಹೇಳುವವರ, ನಮ್ಮ ಸರ್ಕಾರದ ಲಾಭ ಪಡೆದು ನಕ್ರ ಆಡುವವರ ಜತೆ ಹೋಗಬೇಡಿ ಎಂದರು.