ಮಡಿಕೇರಿ, ಡಿ. ೨೩: ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯಿಂದ ಅತ್ಯುತ್ತಮ ಸೇವೆ ಸಲ್ಲಿಸಿರುವ ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಉತ್ತಮ ಶಿಕ್ಷಕ ಮತ್ತು ಉಪನ್ಯಾಸಕರು ಪ್ರಶಸ್ತಿ ಪುರಸ್ಕೃತರಾದ ಎಲ್ಲಾ ಶಿಕ್ಷಕರನ್ನು ಮತ್ತು ಉಪನ್ಯಾಸಕರನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಬೆಂಗಳೂರಿನ ಬಿಜಿಎಸ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಿದರು. ಈ ಸಂದರ್ಭ ಜಿಲ್ಲೆಯ ಮೂವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಾಪೋಕ್ಲು ಕೆ.ಪಿ.ಎಸ್. ಶಾಲೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಅವನಿಜಾ, ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಚೆನ್ನಯನಕೋಟೆ ಶಾಲೆಯ ಬಿ.ಬಿ. ಜಾಜಿ, ಕಳತ್ಮಾಡು ಶಾಲೆಯ ಟಿ.ವಿ. ಭಾಗ್ಯವತಿ ಅವರುಗಳನ್ನು ಸನ್ಮಾನಿಸಲಾಯಿತು.