ಏಪ್ರಿಲ್ ೨೦ ಮತ್ತು ೨೧ರಂದು ಸಿಇಟಿ ಪರೀಕ್ಷೆ

ಬೆಂಗಳೂರು, ಡಿ. ೨೩ : ದ್ವಿತೀಯ ಪಿಯುಸಿ ವೇಳಾಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ಸಿಇಟಿ ಪರೀಕ್ಷಾ ದಿನಾಂಕ ಪ್ರಕಟಗೊಂಡಿದ್ದು, ಇಂಜಿನಿಯರಿAಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ೨೦೨೪-೨೫ ರಲ್ಲಿ ಪ್ರವೇಶಾತಿ ಬಯಸುವವರಿಗಾಗಿ ಮುಂಬರುವ ಏಪ್ರಿಲ್ ೨೦ ಮತ್ತು ೨೧ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.ಏ.೨೦ ರ ಬೆಳಿಗ್ಗೆ ೧೦.೩೦ ರಿಂದ ಜೀವಶಾಸ್ತç, ಮಧ್ಯಾಹ್ನ ೨.೩೦ ರಿಂದ ಗಣಿತ, ೨೧ ರಂದು ಬೆಳಿಗ್ಗೆ ಭೌತಶಾಸ್ತç ಮತ್ತು ಮಧ್ಯಾಹ್ನ ರಸಾಯನಶಾಸ್ತç, ಪರೀಕ್ಷೆ ತಲಾ ೬೦ ಅಂಕಗಳಿಗೆ ನಡೆಯಲಿದೆ. ಹಾಗೆಯೇ, ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.೧೯ ರ ಶುಕ್ರವಾರದಂದು ಬೆಂಗಳೂರು, ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ ಮತ್ತು ಮಂಗಳೂರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಆದ್ದರಿಂದ, ಆಸಕ್ತ ಅಭ್ಯರ್ಥಿಗಳು ಜನವರಿ ೧೦ ರಿಂದ ನಿಗದಿತ ಶುಲ್ಕದೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. ನ್ಯಾಚುರೋಪಥಿ ಮತ್ತು ಯೋಗ, ಬಿ.ಫಾರ್ಮಾ, ಫಾರ್ಮಾ-ಡಿ, ದ್ವಿತೀಯ ವರ್ಷದ ಬಿ.ಫಾರ್ಮಾ, ಕೃಷಿ ಕೋರ್ಸ್ಗಳು, ಪಶು ಸಂಗೋಪನೆ, ಬಿಎಸ್‌ಸಿ (ನರ್ಸಿಂಗ್), ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಗೂ ಈ ಸೂಚನೆ ಅನ್ವಯಿಸುತ್ತದೆ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸರಿಯಾದ ಆರ್.ಡಿ. ಸಂಖ್ಯೆ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಕಲ್ಯಾಣ ಕರ್ನಾಟಕ (೩೭೧ ಜೆ) ಪ್ರಮಾಣಪತ್ರಕ್ಕೆ ಸಂಬAಧಿಸಿದ ಅಗತ್ಯ ವಿವರಗಳನ್ನು ದಾಖಲಿಸಬೇಕು. ತಪ್ಪಿದಲ್ಲಿ, ಇಂಥವರು ಅರ್ಜಿ ಸಲ್ಲಿಕೆ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇಂಜಿನಿಯರಿAಗ್ ನ ೩ನೇ ಸೆಮಿಸ್ಟರ್ ಗೆ ನೇರ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏ.೧೮ ರಂದು ಸಿಇಟಿ ನಡೆಸಲಾಗುವುದು. ಇಂಥವರು ಅರ್ಜಿ ತುಂಬಲು ಸದ್ಯದಲ್ಲೇ ಪೋರ್ಟಲ್ ತೆರೆಯಲಾಗುವುದು. ಅದೇ ರೀತಿಯಲ್ಲಿ ಎಂಬಿಎ, ಎಂಸಿಎ, ಎಂ.ಇ, ಎಂ.ಟೆಕ್, ಎಂ.ಆರ್ಕ್ ಕೋರ್ಸ್ ಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏ.೧೮ ಮತ್ತು ೧೯ ರಂದು ಪಿಜಿಸಿಇಟಿ ನಡೆಸಲಾಗುವುದು. ಇವರಿಗೂ ಸಹ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಪೋರ್ಟಲ್ ತೆರೆಯಲಾಗುವುದು ಎಂದು ಹೇಳಿದ್ದಾರೆ.

ಗ್ಯಾಸ್ ಗೀಸರ್ ಲೀಕ್ ಆಗಿ ಮಹಿಳೆ ಸಾವು: ಮಗು ಸ್ಥಿತಿ ಗಂಭೀರ

ಬೆAಗಳೂರು, ಡಿ. ೨೩: ಸ್ನಾನಕ್ಕೆ ಹೋದಾಗ ಬಾತ್‌ರೂಮ್‌ನಲ್ಲಿ ಗ್ಯಾಸ್ ಗೀಸರ್ ಲೀಕ್ ಆಗಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಂಗಳೂರಿನ ಅಶ್ವತ್ ನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರಮ್ಯ (೨೩) ಎಂದು ಗುರುತಿಸಲಾಗಿದೆ. ರಮ್ಯ ಅವರು ತಮ್ಮ ನಾಲ್ಕು ವರ್ಷದ ಮಗುವಿನೊಂದಿಗೆ ಸ್ನಾನ ಮಾಡಲು ಹೋಗಿದ್ದಾಗ ಗ್ಯಾಸ್ ಗೀಸರ್‌ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೆöÊಡ್ ಸೋರಿಕೆಯಾಗಿದೆ. ಗೀಸರ್ ಸೋರಿಕೆಯಾದ ಕಾರಣ ಸ್ನಾನ ಮಾಡುತ್ತಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಕುಟುಂಬಸ್ಥರು ತಕ್ಷಣ ರಮ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಮ್ಯ ಮೃತಪಟ್ಟಿದ್ದಾರೆ. ಗರ್ಭಿಣಿಯಾಗಿದ್ದ ರಮ್ಯ ಅವರ ಮಗುವೂ ಪ್ರಪಂಚ ನೋಡುವ ಮುನ್ನವೇ ಗರ್ಭದಲ್ಲೇ ಮೃತಪಟ್ಟಿದೆ. ಇತ್ತ ರಮ್ಯ ಅವರ ನಾಲ್ಕು ವರ್ಷದ ಮಗುವಿಗೂ ಚಿಕಿತ್ಸೆ ಮುಂದುವರಿದಿದೆ.

ಲಸಿಕೆ ಪಡೆದ ಮರುದಿನವೇ ಮಗು ಸಾವು

ಧಾರವಾಡ, ಡಿ. ೨೩: ಅಂಗನವಾಡಿ ಕೇಂದ್ರದ ಸಿಬ್ಬಂದಿಯಿAದ ಲಸಿಕೆ ಪಡೆದ ಮರುದಿನ ೨ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದ ಉಣಕಲ್‌ನಲ್ಲಿ ನಡೆದಿದೆ. ಹುಬ್ಬಳ್ಳಿಯ ಸಾಯಿನಗರದ ಚಿರು ಮೃತ ಬಾಲಕ. ಪ್ರತಿ ಗುರುವಾರ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಲಸಿಕೆ ಹಾಕಲಾಗುತ್ತದೆ. ಬುಧವಾರ ಆಶಾ ಕಾರ್ಯಕರ್ತೆಯರು ಮಗುವನ್ನು ಆಸ್ಪತ್ರೆಗೆ ಕರೆದೊಯ್ದು ಲಸಿಕೆ ಹಾಕಿದ್ದಾರೆ. ಗುರುವಾರ ಆಟವಾಡುತ್ತಿದ್ದ ಮಗು ಹಠಾತ್ ಸಾವನ್ನಪ್ಪಿದೆ. ಗುರುವಾರ ಮರಣೋತ್ತರ ಪರೀಕ್ಷೆಗೆ ಒತ್ತಾಯಿಸಿದ ಮಗುವಿನ ಕುಟುಂಬದವರು ಶುಕ್ರವಾರ ಮರಣೋತ್ತರ ಪರೀಕ್ಷೆಗೆ ನಿರಾಕರಿಸಿ ಶವವನ್ನು ತಮ್ಮೊಂದಿಗೆ ಕೊಂಡೊಯ್ದರು. ಅದೇ ಲಸಿಕೆಯನ್ನು ಇತರ ಮಕ್ಕಳಿಗೆ ನೀಡಲಾಗಿದೆ, ಅವರಲ್ಲಿ ಯಾರಿಗೂ ಯಾವುದೇ ತೊಂದರೆ ಆಗಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ, ಆದರೆ ಘಟನೆಯ ಬಗ್ಗೆ ತನಿಖೆ ನಡೆಸಲು ಇಲಾಖೆ ಸಿದ್ಧವಾಗಿದೆ ಎಂದು ಹೇಳಿದೆ.