ಮಡಿಕೇರಿ, ಡಿ. ೨೩ : ಜಿಲ್ಲೆಯ ನೆರೆ ರಾಜ್ಯ ಕೇರಳದಲ್ಲಿ ಕೋವಿಡ್-೧೯ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಗಡಿ ಭಾಗದಲ್ಲಿಯೂ ಸಹ ಅಗತ್ಯ ಮುನ್ನೆಚ್ಚರ ವಹಿಸುವುದು, ಜೊತೆಗೆ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದರು. ವಿವಿಧ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಶೀಲನಾ ಸಂದರ್ಭದಲ್ಲಿ ಅವರು ಮಾತನಾಡಿದರು.

ನೆರೆಯ ರಾಜ್ಯದಲ್ಲಿ ಕೆಲವು ದಿನಗಳಿಂದ ಕೋವಿಡ್-೧೯ ಪ್ರಕರಣಗಳ ಸಂಖ್ಯೆ ಏರಿಕೆಯಾಗುವುದರಿಂದ ಜಿಲ್ಲೆಯಲ್ಲಿಯೂ ಸಹ ಅಗತ್ಯ ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ. ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಗ್ರಾಮದ ಗಡಿ ಪ್ರದೇಶದಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವುದರ ಜೊತೆಗೆ ಅಗತ್ಯ ತಪಾಸಣೆ ಕೈಗೊಳ್ಳುವಂತೆ ತಿಳಿಸಿದರು.

ವಿವಿಧ ಕಡೆಗಳಲ್ಲಿ ಜೆಎನ್.೧ ಪ್ರಕರಣಗಳು ವರದಿಯಾಗಿವೆ. ಆದ್ದರಿಂದ ಅಗತ್ಯ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ. ಆದರೆ ಆತಂಕಪಡುವ ಅಗತ್ಯವಿಲ್ಲ. ಆದರೂ ಎಲ್ಲರೂ ಮುನ್ನೆಚ್ಚರ ವಹಿಸಬೇಕಿದೆ. ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ, ಉಪಕರಣಗಳು ಇರಬೇಕು. ಆರೋಗ್ಯಕ್ಕೆ ಸಂಬAಧಿಸಿದAತೆ ಉಪಕರಣಗಳು ಹಾಗೂ ಸೌಲಭ್ಯಗಳು ಬೇಕಿದ್ದಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಡಿಎಚ್‌ಒಗೆ ಡಾ.ಪ್ರಸಾದ್ ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಜಿಲ್ಲೆಯ ಗಡಿ ಪ್ರದೇಶದಲ್ಲಿ ಸರ್ಕಾರದ ನಿರ್ದೇಶನದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್, ವೆಂಟಿಲೇಟರ್, ಹಾಸಿಗೆ, ಔಷಧಿ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಶಕ್ತಿ ಯೋಜನೆಯಡಿ ಜಿಲ್ಲೆಗೆ ಹೊಸ ಬಸ್‌ಗಳು ಶೀಘ್ರ ಬರಲಿದ್ದು, ಈಗಾಗಲೇ ಬಸ್ ಖರೀದಿಗೆ ಮುಂದಾಗಲಾಗಿದೆ ಎಂದು ಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಹೇಳಿದರು. ಯಾವ ಯಾವ ಊರುಗಳಿಗೆ ಬಸ್ ಅಗತ್ಯವಿದೆ. ಅಲ್ಲಿಗೆ ಬಸ್ ಸೌಲಭ್ಯ ಕಲ್ಪಿಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಗಮನಹರಿಸಬೇಕು. ಅನ್ನಭಾಗ್ಯ ಯೋಜನೆಯಡಿ ಸರ್ಕಾರದ ನಿಯಮದಂತೆ ಪಡಿತರ ವಿತರಿಸಬೇಕು ಬಿಪಿಎಲ್, ಅಂತ್ಯೋದಯ ಅನ್ನಭಾಗ್ಯ ಯೋಜನೆ ಹೀಗೆ ಹಲವು ವಿಚಾರಗಳ ಕುರಿತು ಮಾಹಿತಿ ಪಡೆದರು.

ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತೀ ಯೂನಿಟ್ ಸದಸ್ಯರಿಗೆ ೫ ಕೆ.ಜಿ ಅಕ್ಕಿಯಂತೆ ಉಚಿತವಾಗಿ ವಿತರಿಸಲಾಗುತ್ತಿದೆ. ಹಾಗೂ ಆದ್ಯತಾ(ಎಎವೈ) ಪಡಿತರ ಚೀಟಿದಾರರಿಗೆ ಪ್ರತೀ ಪಡಿತರ ಚೀಟಿಗೆ ೩೫ ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಆಹಾರ ಇಲಾಖೆಯ ಕಿರಣ್ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ೧,೧೦,೮೨೪ ಪಡಿತರ ಚೀಟಿದಾರರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಆದ್ಯತೇತರ ಪಡಿತರ ಚೀಟಿದಾರರಿಗೆ ಸಂಬAಧಿಸಿದAತೆ ಪಡಿತರಕ್ಕೆ ನೋಂದಾಯಿಸಿಕೊAಡ ಪಡಿತರ ಚೀಟಿದಾರರಿಗೆ ೧ ಯೂನಿಟ್ ಗೆ ೫ ಕೆ.ಜಿ ಅಕ್ಕಿ, ೧ ಕ್ಕಿಂತ ಮೇಲ್ಪಟ್ಟ ಯೂನಿಟ್ ಗೆ ೧೦ ಕೆ.ಜಿ ಅಕ್ಕಿಯನ್ನು ೧ ಕೆ.ಜಿ ಗೆ ರೂ ೧೫ ರಂತೆ ಪಡೆದು ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ ೨೬,೧೭೨ ಆದ್ಯತೇತರ (ಎಪಿಎಲ್) ಪಡಿತರ ಚೀಟಿದಾರರು ಪಡಿತರ ಪಡೆಯಲು ಹೆಸರು ನೋಂದಾಯಿಸಿಕೊAಡಿರುತ್ತಾರೆ ಎಂದು ಅವರು ಮಾಹಿತಿ ನೀಡಿದರು.

ಕೊಡಗು ಜಿಲ್ಲೆಯಲ್ಲಿ ಗೃಹಲಕ್ಷಿö್ಮ ಯೋಜನೆಯಡಿ ೧.೩೧ ಲಕ್ಷ ಮಹಿಳೆ ಯರು ಹೆಸರು ನೋಂದಾಯಿಸುವ ಗುರಿ ಇದ್ದು, ಇವರಲ್ಲಿ ಈಗಾಗಲೇ ೧.೧೩ ಲಕ್ಷ ಮಹಿಳೆ ಯರು ಹೆಸರು ನೋಂದಾಯಿಸಿದ್ದಾರೆ. ಉಳಿದಂತೆ ೧೮ ಸಾವಿರ ಕುಟುಂಬದ ಮಹಿಳೆಯರು ಹೆಸರು ನೋಂದಾಯಿಸಲು ಬಾಕಿ ಇದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು ಮಾಹಿತಿ ನೀಡಿದರು.

ಗೃಹಲಕ್ಷಿö್ಮ ಯೋಜನೆಯಡಿ ನವೆಂಬರ್‌ವರೆಗೆ ಹಣ ಬ್ಯಾಂಕ್ ಖಾತೆಗೆ ಜಮೆ ಆಗಿದೆ. ತಾಂತ್ರಿಕ ಸಮಸ್ಯೆಯಿಂದ ೫ ಸಾವಿರ ಮಂದಿಗೆ ಹಣ ಜಮೆ ಆಗಲು ಬಾಕಿ ಇದೆ ಎಂದು ಮಾಹಿತಿ ನೀಡಿದರು. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗದAತೆ ಗಮನಹರಿಸುವಂತೆ ಸ್ಥಳೀಯ ಸಂಸ್ಥೆಗಳು ಹಾಗೂ ತಹಶೀಲ್ದಾರರಿಗೆ ಡಾ.ಎನ್.ವಿ.ಪ್ರಸಾದ್ ಸೂಚಿಸಿದರು. ರಸ್ತೆ ಸಂಬAಧಿಸಿದAತೆ ಜಿಲ್ಲಾ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಲಾಖೆಯ ಬಾಕಿ ಇರುವ ರಸ್ತೆ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಂಚಾಯತ್‌ರಾಜ್ ಎಂಜಿನಿಯರಿAಗ್ ವಿಭಾಗದ ಮುತ್ತುರಾಜ್ ಅವರು ೨೭ ಕಾಮಗಾರಿಗಳಲ್ಲಿ ೨೪ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಕಾಮಗಾರಿ ಆರಂಭಿಸಬೇಕಿದೆ ಎಂದು ಮಾಹಿತಿ ನೀಡಿದರು. ತಾ.ಪಂ.ಇಒಗಳಾದ ಶೇಖರ್, ಅಪ್ಪಣ್ಣ, ಜಯಣ್ಣ ಅವರು ಜಿಲ್ಲೆಯಲ್ಲಿ ಹಲವು ಸಂಘ ಸಂಸ್ಥೆಗಳು ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದು, ಸ್ವ ಉದ್ಯೋಗ ಕೈಗೊಂಡಿದ್ದಾರೆ. ನರ್ಸರಿ ಸೇರಿದಂತೆ ಕಾಫಿ, ಕರಿಮೆಣಸು, ಇತರೆ ಉದ್ಯಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ವಿಶೇಷವಾಗಿದೆ ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.