ಸೋಮವಾರಪೇಟೆ, ಡಿ. ೨೩: ಸಂಸತ್ ಭವನದ ಆವರಣದಲ್ಲಿ ಉಪರಾಷ್ಟçಪತಿ ಹಾಗೂ ರಾಜ್ಯಸಭಾ ಸಭಾಪತಿಯ ಧನಕರ್ ಜೀ ಅವರನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಆರೋಪಿಸಿ ಸೋಮವಾರಪೆಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇಲ್ಲಿಯ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸಂಸದರ ವಿರುದ್ಧ ಧಿಕ್ಕಾರ ಕೂಗಿದರು.

ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ, ಪ್ರಮುಖರಾದ ಮಹೇಶ್ ತಿಮ್ಮಯ್ಯ, ಹೆಚ್.ಕೆ. ಮಾದಪ್ಪ, ಪೊನ್ನಪ್ಪ, ಸೋಮೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.