ಮಡಿಕೇರಿ, ಡಿ. ೨೩: ಕುಶಾಲನಗರದಲ್ಲಿ ನಡೆಯಲಿರುವ ಹನುಮ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ರಡಿ ತಾ. ೨೪ ರಂದು (ಇಂದು) ಬೆಳಿಗ್ಗೆ ೬ ಗಂಟೆಯಿAದ ಅದೇ ದಿನ ಮಧ್ಯರಾತ್ರಿ ೧೨ ಗಂಟೆಯವರೆಗೆ ಕುಶಾಲನಗರ ಮತ್ತು ಸುತ್ತಮುತ್ತ ೨೦ ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್, ರೆಸ್ಟೋರೆಂಟ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.