ಮುಳ್ಳೂರು, ಡಿ. ೨೩: ಸಮೀಪದ ಆಲೂರು ಸಿದ್ದಾಪುರ ಗ್ರಾ.ಪಂ. ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಸಮುದಾಯ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಸದರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ೨೦೨೩ನೇ ಸಾಲಿನ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಿಂದ ನಡೆದ ಕಾಮಗಾರಿಗಳು ಮತ್ತು ವೆಚ್ಚ ಹಾಗೂ ೧೫ನೇ ಹಣಕಾಸು ಯೋಜನೆಯಿಂದ ನಡೆದ ಕಾಮಗಾರಿಗಳು ಮತ್ತು ವೆಚ್ಚ ಇದರ ವರದಿಯನ್ನು ಉದ್ಯೋಗ ಖಾತ್ರಿ ಯೋಜನೆಯ ತಾಲೂಕು ಅಧಿಕಾರಿ ದಿನೇಶ್ ಮಂಡಿಸಿದರು. ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಿಂದ ೨೦೨೩ ಸಾಲಿನಲ್ಲಿ ವಿವಿಧ ೪೦ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು ರೂ. ೪೦ ಲಕ್ಷದ ಮುಳ್ಳೂರು, ಡಿ. ೨೩: ಸಮೀಪದ ಆಲೂರು ಸಿದ್ದಾಪುರ ಗ್ರಾ.ಪಂ. ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಸಮುದಾಯ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಸದರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ೨೦೨೩ನೇ ಸಾಲಿನ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಿಂದ ನಡೆದ ಕಾಮಗಾರಿಗಳು ಮತ್ತು ವೆಚ್ಚ ಹಾಗೂ ೧೫ನೇ ಹಣಕಾಸು ಯೋಜನೆಯಿಂದ ನಡೆದ ಕಾಮಗಾರಿಗಳು ಮತ್ತು ವೆಚ್ಚ ಇದರ ವರದಿಯನ್ನು ಉದ್ಯೋಗ ಖಾತ್ರಿ ಯೋಜನೆಯ ತಾಲೂಕು ಅಧಿಕಾರಿ ದಿನೇಶ್ ಮಂಡಿಸಿದರು. ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಿಂದ ೨೦೨೩ ಸಾಲಿನಲ್ಲಿ ವಿವಿಧ ೪೦ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು ರೂ. ೪೦ ಲಕ್ಷದ ಹೈನುಗಾರಿಕೆ, ಕುರಿ, ಕೋಳಿ,ಹಂದಿ, ಹಸು ಇನ್ನು ಮುಂತಾದವುಗಳನ್ನು ಸಾಕಾಣಿಕೆ ಮಾಡಲು ವೈಯುಕ್ತಿಕ ಸಾಲ ಮತ್ತು ಸಬ್ಸಿಡಿ ವ್ಯವಸ್ಥೆಯನ್ನು ಸರಕಾರ ಕಲ್ಪಿಸಿಕೊಡುತ್ತದೆ ಎಂದರು.

ಗ್ರಾ.ಪA. ಅಭಿವೃದ್ದಿ ಅಧಿಕಾರಿ ಹರೀಶ್ ಮಾಹಿತಿ ನೀಡಿ-ಗ್ರಾ.ಪಂ. ವ್ಯಾಪ್ತಿಯಲ್ಲಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆ ಮತ್ತು ೧೫ನೇ ಹಣಕಾಸು ಯೋಜನೆ ಅನುದಾನಗಳಲ್ಲಿ ಆಗಿರುವ ಕಾಮಗಾರಿಗಳು ಆಗಿರುವ ವೆಚ್ಚವನ್ನು ಗ್ರಾಮಸ್ಥರಿಗೆ ತಿಳಿಸುವ ಜವಾಬ್ದಾರಿ ಸಂಬAಧಪಟ್ಟ ಗ್ರಾ.ಪಂ. ಯವರದಾಗಿದ್ದು ಈ ನಿಟ್ಟಿನಲ್ಲಿ ಈ ಯೋಜನೆಗಳಿಗೆ ಸಂಬAಧ ಪಟ್ಟ ಗ್ರಾಮಸಭೆಯನ್ನು ನಡೆಸಲು ಸರಕಾರ ಆದೇಶ ನೀಡಿರುವ ಉದ್ದೇಶದಿಂದ ಸಭೆಯನ್ನು ನಡೆಸಲಾಗಿದ್ದು ಗ್ರಾ.ಪಂ.ಯ ಅಭಿವೃದ್ದಿಗೂ ಇದು ಪೂರಕವಾಗಿದೆ ಎಂದರು.

ಸಭೆಯಲ್ಲಿ ಆಲೂರು ಸಿದ್ದಾಪುರ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಶ್ರುತಿ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಚಂದ್ರಮೋಹನ್, ಉದ್ಯೋಗ ಖಾತ್ರಿ ಯೋಜನೆ ಅಭಿಯಂತರ ಅಶೋಕ್, ಗ್ರಾ.ಪಂ. ಸದಸ್ಯರು, ಗ್ರಾ.ಪಂ. ಸಿಬ್ಬಂದಿ ಹಾಜರಿದ್ದರು.