ಕುಶಾಲನಗರ, ಡಿ. ೨೩: ವಾರಾಂತ್ಯದ ಸತತ ರಜೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಎಲ್ಲೆಡೆ ಲಾಡ್ಜ್ ರೆಸಾರ್ಟು, ಹೋಂಸ್ಟೇಗಳು, ಪ್ರವಾಸಿಗರಿಂದ ತುಂಬಿ ತುಳುಕುತ್ತಿವೆ.
ಶನಿವಾರ ಕುಶಾಲನಗರದಲ್ಲಿ ಮಧ್ಯಾಹ್ನ ೧೨ ಗಂಟೆಯಿAದ ಸಂಜೆ ೭ ಗಂಟೆವರೆಗೆ ಸಂಚಾರ ವ್ಯವಸ್ಥೆ ಸಂಪೂರ್ಣ ಏರುಪೇರಾಗಿದ್ದು ಕುಶಾಲನಗರ ಪಟ್ಟಣದ ಎರಡು ಕಡೆ ಕಿಲೋಮೀಟರ್ ಗಟ್ಟಲೆ ದೂರದವರೆಗೆ ವಾಹನಗಳು ಸಾಲುಗಟ್ಟಿ ಸಂಚರಿಸುತ್ತಿದ್ದ ದೃಶ್ಯ ಕಂಡು ಬಂತು.
ಮೈಸೂರು-ಗೋಣಿಕೊಪ್ಪ ರಸ್ತೆಯಲ್ಲಿ ಕೂಡ ಮೂರು ಕಿಲೋಮೀಟರ್ಗಿಂತಲೂ ಹೆಚ್ಚು ದೂರದವರೆಗೆ ವಾಹನಗಳು ಸಾಲುಗಟ್ಟಿ ಸಂಚರಿಸುತ್ತಿದ್ದ ದೃಶ್ಯ ಕಂಡುಬAತು.