ಸುಂಟಿಕೊಪ್ಪ, ಡಿ.೨೩ : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಸೋಮವಾರಪೇಟೆ ಯ ಜಯವೀರ ಮಾತೆ ದೇವಾಲಯದ ಸಂಯುಕ್ತಾಶ್ರಯದಲ್ಲಿ ೧೩ನೇ ವರ್ಷದ ಕ್ರೀಡಾಕೂಟದ ಅಂಗವಾಗಿ ೩ ದಿನಗಳ ಕಾಲ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಸೇರಿದಂತೆ ಹಗ್ಗಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್À ಅಧ್ಯಕ್ಷ ಎಸ್.ಎಂ. ಡಿಸಿಲ್ವಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಳೆದ ೧೨ ವರ್ಷಗಳಿಂದ ಜಿಲ್ಲೆಯ ವಿವಿಧ ಧರ್ಮಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಕ್ರೆöÊಸ್ತ ಬಾಂಧವ ರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕ್ರೀಡಾ ಕೂಟಗಳನ್ನು ಆಯೋಜಿಸಲಾಗುತ್ತಿದೆ.
ಈ ಬಾರಿ ಸೋಮವಾರಪೇಟೆಯ ಬಳಗುಂದ ಸರಕಾರಿ ಶಾಲಾ ಮೈದಾನ ದಲ್ಲಿ ಜನವರಿ ೧೩, ೧೪ ಮತ್ತು ೧೫ ರಂದು ಕೊಡಗು ಜಿಲ್ಲಾ ಮಟ್ಟದ ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಜಯವೀರ ಮಾತೆ ದೇವಾಲಯದ ಸಂಯುಕ್ತಾಶ್ರಯದಲ್ಲಿ ೧೩ನೇ ವಾರ್ಷಿಕ ಕ್ರೀಡಾಕೂಟವು ಏರ್ಪಡಿಸಲಾಗಿದೆ. ಕ್ರಿಕೆಟ್ ಪಂದ್ಯಾಟ ದಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ ಟ್ರೋಫಿ ಹಾಗೂ ರೂ. ೫೦,೦೦೦ ನಗದು, ದ್ವಿತೀಯ ಸ್ಥಾನ ಗಳಿಸಿದ ತಂಡಕ್ಕೆ ರೂ. ೩೦,೦೦೦ ಟ್ರೋಫಿ, ಹಗ್ಗ ಜಗ್ಗಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ ತಂಡಕ್ಕೆ ರೂ. ೧೦,೦೦೦ ನಗದು ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ಗಳಿಸಿದ ತಂಡಕ್ಕೆ ರೂ. ೫,೦೦೦ ಹಾಗೂ ಟ್ರೋಫಿಯನ್ನು ನೀಡಲಾಗು ವುದೆಂದು ಸಂಘದ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.