ಕರಿಕೆ, ಡಿ. ೨೪: ಇಲ್ಲಿಗೆ ಸಮೀಪದ ಎಳ್ಳುಕೊಚ್ಚಿ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಅಯ್ಯಪ್ಪ ದೀಪೋತ್ಸವವನ್ನು ವಿಜೃಂಭಣೆಯಿAದ ಆಚರಿಸಲಾಯಿತು.

ಚೆತ್ತುಕಾಯ ಶ್ರೀ ವನಶಾಸ್ತಾವು ದೇವಾಲಯದಲ್ಲಿ ಸಂಪ್ರದಾಯದAತೆ ವಿಶೇಷವಾಗಿ ಪೂಜೆ ಸಲ್ಲಿಸಿ, ನಂತರ ಹಾಲೆ ಮರದ ಕೊಂಬೆಯನ್ನು ಶೃಂಗಾರ ಮಾಡಿ ಅದಕ್ಕೆ ಪೂಜೆ ಸಲ್ಲಿಸಿ, ದೀಪ ಬೆಳಗಿಸಿ ಅಯ್ಯಪ್ಪ ವ್ರತದಾರಿಗಳು ಚಂಡೆ ಮೇಳ, ಮುತ್ತಿನ ಛತ್ರಿ, ಪುಟಾಣಿ ಮಕ್ಕಳ ಆರತಿಯೊಂದಿಗೆ ಸುಮಾರು ಐದು ಕಿ.ಮಿ.ದೂರ ಮೆರವಣಿಗೆ ಸಾಗಿದರು. ಅಯ್ಯಪ್ಪ ಭಜನಾ ಮಂದಿರದಲ್ಲಿ ಮೆರವಣಿಗೆ ಸಮಾಪನಗೊಂಡಿತು.

ನಂತರ ಭಜನೆ, ಪುಟಾಣಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬೆಳಿಗ್ಗೆ ಅಯ್ಯಪ್ಪ ವ್ರತದಾರಿಗಳಿಂದ ಕೆಂಡ ಸೇವೆ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ಗೌರಿಶಂಕರ ಭಟ್ ಪೂಜಾ ವಿಧಿವಿಧಾನಗಳನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ, ದೀಪೋತ್ಸವ ಸಮಿತಿ, ಮಹಿಳಾ ಸಮಿತಿ, ಭಜನಾ ತಂಡ, ಭಕ್ತಾದಿಗಳು ಪಾಲ್ಗೊಂಡಿದ್ದರು. ಭಾಗಮಂಡಲ ಠಾಣಾಧಿಕಾರಿ ಶೋಭಾ ಲಮಣಿ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು