ಸೋಮವಾರಪೇಟೆ, ಡಿ. ೨೪: ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಹಾಸನದ ಅಮ್ಮ ಚಾರಿಟೇಬಲ್ ಟ್ರಸ್ಟ್ ಹಾಗೂ ಲಯನ್ಸ್ ಸಂಸ್ಥೆ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಉಚಿತ ನೇತ್ರ ಪರೀಕ್ಷಾ ಶಿಬಿರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು.

ನುರಿತ ನೇತ್ರ ತಜ್ಞ ಸುದೀಪ್ ಅವರು ಶಿಬಿರದಲ್ಲಿ ಭಾಗವಹಿಸಿ ಸಾರ್ವಜನಿಕರ ನೇತ್ರ ತಪಾಸಣೆ ನಡೆಸಿದರು. ಅಗತ್ಯವಿದ್ದವರಿಗೆ ಉಚಿತ ನೇತ್ರ ಶಸ್ತçಚಿಕಿತ್ಸೆಯನ್ನು ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆಯಲ್ಲಿ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಶಿಬಿರದಲ್ಲಿ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎ.ಎಸ್. ಮಹೇಶ್, ಪದಾಧಿಕಾರಿಗಳಾದ ಸಿ.ಕೆ. ಮಲ್ಲಪ್ಪ, ಲೀಲಾರಾಂ, ಸಿ.ಕೆ. ರೋಹಿತ್ ಇದ್ದರು.