ಮಡಿಕೇರಿ, ಡಿ. ೨೪: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತ ಆಶ್ರಯದಲ್ಲಿ ತಾ. ೨೬ ರಂದು ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ ೧೦ ಗಂಟೆಗೆ ಮಯೂರ ವ್ಯಾಲಿವ್ಯೂ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೃಷಿಯೇತರ ಮತ್ತು ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ಆದಾಯ ತೆರಿಗೆ, ಜಿ.ಎಸ್.ಟಿ. ಮತ್ತು ಸಹಕಾರ ಸಂಘಗಳ ಆಡಳಿತ ನಿರ್ವಹಣೆ ಕುರಿತು ವಿಶೇಷ ಕಾರ್ಯಕ್ರಮದಡಿ ಕಾರ್ಯಾಗಾರ ನಡೆಯಲಿದೆ. ಸಹಕಾರ ಯೂನಿಯನ್ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಜಯಕರ ಶೆಟ್ಟಿ ಬಿ. ಇಂದ್ರಾಳಿ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ರಾಜ್ಯದ ಸಹಕಾರ ಮಂಡಳಿ ನಿರ್ದೇಶಕ ಬಿ.ಸಿ. ಲೋಕಪ್ಪ ಗೌಡ, ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಪಿ.ಸಿ. ಮನು ರಾಮಚಂದ್ರ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.