ಸುಂಟಿಕೊಪ್ಪ, ಡಿ. ೨೫: ಇಲ್ಲಿನ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ೫೩ನೇ ವರ್ಷದ ವಾರ್ಷಿಕ ಮಂಡಲ ಪೂಜಾ ಮಹೋತ್ಸವ ತಾ.೨೭ ರಂದು ನಡೆಯಲಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಂ.ಸುರೇಶ್ ಪುಟ್ಟ ಅವರು ಅಂದು ಪೂರ್ವಾಹ್ನ ಗಣಪತಿ ಹೋಮದೊಂದಿಗೆ ಕಾರ್ಯಕ್ರಮಗಳು ಆರಂಭಗೊAಡು ಬಿಲ್ವಪತ್ರೆ ಅರ್ಚನೆ, ತುಳಸಿ ಅರ್ಚನೆ, ಪಂಚಾಮೃತ ಅಭಿಷೇಕ ಇತ್ಯಾದಿಗಳು ನಡೆಯಲಿದೆ. ಮಧ್ಯಾಹ್ನ ೧ ರಿಂದ ೪ ಗಂಟೆಯವರೆಗೆ ಅನ್ನ ಸಂತರ್ಪಣೆ ನಡೆಯಲಿದ್ದು, ಸಂಜೆ ೬.೩೦ಕ್ಕೆ ದೀಪಾರಾಧನೆ ಮತ್ತು ಮೆರವಣಿಗೆ ನಡೆಯಲಿದೆ. ರಾತ್ರಿ ೭.೩೦ಕ್ಕೆ ದುರ್ಗಾಪೂಜೆ ನಡೆಯಲಿದ್ದು, ಮಹಾಮಂಗಳಾರತಿ ಬಳಿಕ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ತಿಳಿಸಿದ್ದಾರೆ.