ವೀರಾಜಪೇಟೆ, ಡಿ. ೨೫: ಪ್ರಜಾಪ್ರಭುತ್ವ ರಾಷ್ಟçದಲ್ಲಿ ಪ್ರತಿಯೊಬ್ಬ ನಾಗರಿಕÀ ಸಂವಿಧಾನದ ಅಡಿಯಲ್ಲಿ ಕೆಲಸ ನಿರ್ವಹಿಸಬೇಕಾಗಿದೆ ಎಂದು ವೀರಾಜಪೇಟೆ ಗ್ರಾಮಾಂತರ ಠಾಣೆ ಉಪನಿರೀಕ್ಷಕಿ ವಾಣಿಶ್ರೀ ಹೇಳಿದರು.
ಚಂಬೆಬೆಳ್ಳೂರು ತಟ್ಟಮಕ್ಕಿ ಕಾಲೋನಿಯಲ್ಲಿ ನೂತನ ಅಂಬೇಡ್ಕರ್ ಸಂಘವನ್ನು ಉದ್ಘಾಟಿಸಿ ಮಾತನಾಡಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣ, ಹೋರಾಟ, ಸಂಘಟಣೆಯ ಮೂಲಕವೇ ಸಂವಿಧಾನವನ್ನು ರಚಿಸಿದವರು. ಎಲ್ಲಾರು ಒಂದೇ. ಒಗ್ಗಟ್ಟಿನಿಂದ ಜೀವನ ಸಾಗಿಸಬೇಕು ಎಂದು ಪ್ರತಿಪಾದಿಸಿದವರು.
ಪ್ರತಿದಿನ ಅಂತಹ ಮಹಾನ್ ವ್ಯಕ್ತಿಗಳ ಸ್ಮರಣೆ ಮಾಡುವಂತಾಗಬೇಕು. ನಿಮ್ಮಲ್ಲಿ ಯಾವುದೇ ಸಮಸ್ಯೆಗಳು ಬಂದರು ಕಾನೂನನ್ನು ಕೈಗೆ ತೆಗೆದುಕೊಳ್ಳುವ ಕೆಲಸ ಆಗಬಾರದು. ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಮಕ್ಕಳು ಮಾದಕ ಚಟಗಳಿಗೆ ಬಲಿಯಾಗುತ್ತಿದ್ದು ತಮ್ಮ ಜೀವನವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅಂತಹ ಘಟನೆಗಳು ಮರುಕಳಿಸದಂತೆ ಸಂಘಟನೆಗಳ ಮೂಲಕ ಯುವ ಜನತೆಯಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಹೇಳಿದರು.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹೆಚ್.ಜಿ. ಗೋಪಾಲ್ ಮಾತನಾಡಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಕಿ ಕೊಟ್ಟಿರುವ ಮಾರ್ಗದರ್ಶನದಂತೆ ನಾವು ನಡೆದುಕೊಳ್ಳಬೇಕು. ಪರಿಶಿಷ್ಟ ಜಾತಿಯ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಅಂತಹ ಪ್ರಕರಣಗಳಲ್ಲಿ ಸಂಘಟನಾತ್ಮಕ ಹೋರಾಟ ನಡೆಸಬೇಕು ಎಂದು ಹೇಳಿದರು.
ಸಂಘಟನಾ ಸಂಚಾಲಕ ಹೆಚ್.ಟಿ. ಮಂಜು, ಮಹಿಳಾ ಘಟಕದ ಸಂಚಾಲಕಿ ಮಂಜುಳಾ, ಚಂಬೆಬೆಳ್ಳೂರು ಗ್ರಾ.ಪಂ. ಅಧ್ಯಕ್ಷೆ ಪ್ರೇಮಾ, ತಾಲೂಕು ಅಧ್ಯಕ್ಷ ಸುರೇಶ್ ಉಪಸ್ಥಿತರಿದ್ದರು.