ಸೋಮವಾರಪೇಟೆ, ಡಿ. ೨೫: ಇಲ್ಲಿನ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ದೇವಾಲಯದಲ್ಲಿ ಬೆಳಗ್ಗಿನಿಂದ ಸಂಜೆಯವರೆಗೂ ವಿಶೇಷ ಪೂಜೆಗಳು ನಡೆದವು. ದೇವಾಲಯದ ಅರ್ಚಕ ನಂಜುAಡೇಶ್ವರ ಭಟ್ ಅವರ ನೇತೃತ್ವದಲ್ಲಿ ಶ್ರೀ ಆಂಜನೇಯ ದೇವರಿಗೆ ಪಂಚಾಮೃತ ಅಭಿಷೇಕ, ಮಾರುತಿ ಹೋಮ, ಪ್ರಸಾದ ವಿನಿಯೋಗ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ಸಾರ್ವಜನಿಕ ಭಕ್ತಾದಿಗಳಿಗೆ ಅನ್ನದಾನ ನೆರವೇರಿತು.
ಸಂಜೆ ಗಾಯಕ ರವಿ ಭೂತನಕಾಡು ಅವರಿಂದ ಭಕ್ತಿಗೀತೆಗಳ ಗಾಯನ ಸುಧೆ ನಡೆಯಿತು. ನೂರಾರು ಮಂದಿ ಭಕ್ತಾದಿಗಳು ಪೂಜಾ ಕಾರ್ಯದಲ್ಲಿ ಭಾಗಿಯಾಗಿದ್ದರು.