ಗೋಣಿಕೊಪ್ಪ ವರದಿ, ಡಿ. ೨೫: ಮಾಜಿ ಪ್ರಧಾನ ಮಂತ್ರಿ, ಬಿಜೆಪಿಯ ಸಂಸ್ಥಾಪಕ ಅಧ್ಯಕ್ಷ ಅಟಲ್ ಬಿಹಾರಿ ವಾಜಪೇಯಿ ಅವರ ೧೦೦ ನೇ ಜನುಮ ದಿನವನ್ನು ಗೋಣಿಕೊಪ್ಪ ಬಿಜೆಪಿ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.

ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಸಾಧನೆ ಬಗ್ಗೆ ತಿಳಿಸಲಾಯಿತು.

ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲಿರ ಚಲನ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ, ಮಂಡಲ ಕಾರ್ಯದರ್ಶಿಗಳಾದ ಪ್ರವೀಣ್ ಅಜ್ಜಿಕುಟೀರ, ಬೋಪಣ್ಣ ವಾಟೇರಿರ, ಜಿಲ್ಲಾ ಕೃಷಿ ಮೋರ್ಚಾ ಕಾರ್ಯದರ್ಶಿ ಕಬೀರ್ ದಾಸ್, ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಕವಿತಾ ಬೋಜಪ್ಪ, ಓಬಿಸಿ ಮೋರ್ಚಾ ಅಧ್ಯಕ್ಷ ರಾಜೇಶ್, ಜಿಲ್ಲಾ ಸಾಮಾಜಿಕ ಜಾಲತಾಣ ನಿರ್ವಾಹಕ ಸುನಿಲ್ ರೈ, ಗೋಣಿಕೊಪ್ಪ ಶಕ್ತಿ ಕೇಂದ್ರ ಪ್ರಮುಖ್ ಸುರೇಶ್ ರೈ, ಎಸ್.ಟಿ ಮೋರ್ಚಾ ಅಧ್ಯಕ್ಷ ಮುತ್ತುರಾಜ್, ಗೋಣಿಕೊಪ್ಪ ಗ್ರಾ. ಪಂ. ಅಧ್ಯಕ್ಷೆ ಸೌಮ್ಯ ಬಾಲು, ಇದ್ದರು.