ಮಡಿಕೇರಿ, ಡಿ. ೨೫: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕಾ ಆಸಕ್ತಿ ಬೆಳೆಸುವುದರೊಂದಿಗೆ ಅವರಲ್ಲಿ ವೈಜ್ಞಾನಿಕ ಅನ್ವೇಷಣೆ ಬೆಳೆಸುವ ಮೂಲಕ ಅವರನ್ನು ಭವಿಷ್ಯದ ವಿಜ್ಞಾನಿ ಗಳಾಗಿ ರೂಪಿಸಲು ಪ್ರೇರೇಪಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿಮ್ಯಾಥ್ಯೂ ಕರೆ ನೀಡಿದರು.

ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ (ಎನ್.ಸಿ.ಎಸ್.ಟಿ.ಸಿ.), ಮಡಿಕೇರಿ ನಗರದ ಕೊಡಗು ವಿದ್ಯಾಲಯ, ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ-ಸ್ಟೆಪ್ಸ್), ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಮಡಿಕೇರಿ ನಗರದ ಕೊಡಗು ವಿದ್ಯಾಲಯ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿ ಕೊಳ್ಳೋಣ ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಕೊಡಗು ವಿದ್ಯಾಲಯ ಶಿಕ್ಷಣ ಸಂಸ್ಥೆ ಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾಮಟ್ಟದ ೩೧ನೇ ರಾಷ್ಟಿçÃಯ ಮಕ್ಕಳ ವಿಜ್ಞಾನ ಸಮಾವೇಶ ೨೦೨೩ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಡೆಯುತ್ತಿರುವ ವನ್ಯ ಜೀವಿಗಳು ಮತ್ತು ಮಾನವ ಸಂಘರ್ಷದ ಬಗ್ಗೆ ವಿದ್ಯಾರ್ಥಿಗಳು ವೈಜ್ಞಾನಿಕ ಅಧ್ಯಯನ ಕೈಗೊಂಡು ಸೂಕ್ತ ಪರಿಹಾರ ಕಂಡುಕೊಳ್ಳುವ ಮೂಲಕ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಬೇಕು. ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರ ನೀಡಲು ಪ್ರತಿಯೊಬ್ಬರು ಪಣ ತೊಡಬೇಕಿದೆ ಎಂದರು. ರಾಷ್ಟಿçÃಯ ಮಕ್ಕಳ ವಿಜ್ಞಾನ ಸಮಾವೇಶದ ಪರಿಕಲ್ಪನೆ ಹಾಗೂ ಉದ್ದೇಶದ ಕುರಿತು ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಸಮಾವೇಶದ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕೊಡಗು ವಿದ್ಯಾಲಯದ ಪ್ರಾಂಶುಪಾಲೆ ಕೆ.ಎಸ್. ಸುಮಿತ್ರ ಮಾತನಾಡಿ, ಇಂತಹ ವಿಜ್ಞಾನ ಸಮಾವೇಶಗಳು ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಸುವು ದರೊಂದಿಗೆ ವಿದ್ಯಾರ್ಥಿಗಳಲ್ಲಿ ಭವಿಷ್ಯದಲ್ಲಿ ವಿಜ್ಞಾನ ಕಲಿಕೆಗೆ ಹೆಚ್ಚಿನ ಪ್ರೇರೇಪಣೆ ನೀಡಲು ಸಹಕಾರಿ ಯಾಗಿವೆ ಎಂದರು.

ಸAಸ್ಥೆಯ ಆಡಳಿತಾಧಿಕಾರಿ ಪಿ.ರವಿ, ಸಮಾವೇಶದ ಜಿಲ್ಲಾ ಸಂಯೋಜಕ ಜಿ. ಶ್ರೀಹರ್ಷ, ಶೈಕ್ಷಣಿಕ ಸಂಯೋಜಕ ಎಂ.ಎನ್. ವೆಂಕಟನಾಯಕ್, ವಿಜ್ಞಾನ ಪರಿಷತ್ತಿನ ಪದಾಧಿಕಾರಿಗಳಾದ ಜಿ.ಶ್ರೀನಾಥ್, ಎಸ್.ಹೆಚ್. ಈಶ, ಟಿ.ವಿ. ಶೈಲಾ, ಸಿಆರ್‌ಪಿ ಪಿ.ಆರ್. ಕಲ್ಪನ, ಬಿಆರ್‌ಪಿ ಮಂಜುಳಾ ಚಿತ್ರಾಪುರ, ಗೈಡ್ಸ್ ಸಂಸ್ಥೆಯ ಕ್ಯಾಪ್ಟನ್ ಸಿ.ಎಂ. ಸುಲೋಚನ ಇತರರು ಇದ್ದರು.

ಸಮಾವೇಶದ ಜಿಲ್ಲಾ ಸಂಯೋಜಕ ಜಿ. ಶ್ರೀಹರ್ಷ ಸ್ವಾಗತಿಸಿದರು. ಶಿಕ್ಷಕಿ ಪಿ.ಎಸ್. ಕವಿತ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಲಾವಣ್ಯ ವಂದಿಸಿದರು. ಸಂಸ್ಥೆಯ ವಿದ್ಯಾರ್ಥಿಗಳಾದ ಮನಸ್ವಿ ಮತ್ತು ತಂಡದ ವತಿಯಿಂದ ಪರಿಸರ ಗೀತೆ ಹಾಡಿದರು.

ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ್ದ ೨೪ ಮಂದಿ ವಿದ್ಯಾರ್ಥಿಗಳು ಸಮಾವೇಶದ ಕೇಂದ್ರ ವಿಷಯದಡಿ ವಿವಿಧ ಉಪ ವಿಷಯಗಳ ಕುರಿತು ಸ್ವತಃ ತಯಾರಿಸಿದ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ಮಂಡಿಸಿ ಗಮನ ಸೆಳೆದರು.