ಕುಶಾಲನಗರ, ಡಿ. ೨೬: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಕೊಡಗು ಜಿಲ್ಲಾ ಘಟಕ ಹಾಗೂ ಕುಶಾಲನಗರ ತಾಲೂಕು ಪ್ರೆಸ್ ಕ್ಲಬ್ ಟ್ರಸ್ಟ್, ಸಂಗಮ ಟಿವಿ, ವಂಶಿ ನ್ಯೂಸ್ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ಸೇವಾ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕುಶಾಲನಗರದ ಗಾಯತ್ರಿ ಸಭಾಂಗಣದಲ್ಲಿ ನಡೆಯಿತು.
ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಮಾಜ ಸೇವೆಯೊಂದಿಗೆ ಅಶಕ್ತರಿಗೆ ನೆರವಾದಲ್ಲಿ ಜೀವನದಲ್ಲಿ ಸ್ವಯಂ ತೃಪ್ತಿ ಲಭಿಸಲಿದೆ ಎಂದರು.
ಪ್ರೆಸ್ ಕ್ಲಬ್ ಟ್ರಸ್ಟ್ ಅಧ್ಯಕ್ಷ ಹೆಚ್.ಎಂ. ರಘು ಪ್ರಸ್ತಾವಿಕವಾಗಿ ಮಾತನಾಡಿದರು. ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಸಾಹಿತಿ ಭಾರದ್ವಾಜ್ ಆನಂದತೀರ್ಥ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದಯ್ಯ, ಉದ್ಯಮಿ ಸದಾಶಿವ ಶೆಟ್ಟಿ, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಾ ಇದ್ದರು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.