ನಾಪೋಕ್ಲು, ಡಿ. ೨೬: ಜಿಲ್ಲೆಯ ಯವಕಪಾಡಿ ಗ್ರಾಮದ ನಿವಾಸಿ, ಆದಿವಾಸಿ ಹೋರಾಟಗಾರ ಕುಡಿಯರ ಮುತ್ತಪ್ಪ ಅವರು ರಾಜ್ಯಮಟ್ಟದ ಕೊರವಂಜಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಂಡ್ಯದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ತಾ. ೨೮ ರಂದು ನಡೆಯಲಿರುವ ಕೊರವಂಜಿ ಸಂಸ್ಕೃತಿ ಉತ್ಸವದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಂಡ್ಯ ಜಿಲ್ಲಾ ಕುಳುವ ಸಮಾಜ ಹಾಗೂ ಡ್ರೀಮ್ ಫೌಂಡೇಶನ್ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ.