ಮುಳ್ಳೂರು, ಡಿ. ೨೬: ಶನಿವಾರಸಂತೆಯ ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದೂ ಪರಿಷತ್, ಶ್ರೀರಾಮ ಸೇನೆ, ಭಜರಂಗ ದಳ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಯ ನೂರಾರು ಕಾರ್ಯಕರ್ತರು ಮಂಗಳವಾರ ಬೆಳಿಗ್ಗೆ ದತ್ತಮಾಲೆ ತೊಟ್ಟು ಚಿಕ್ಕಮಗಳೂರು ಜಿಲ್ಲೆಯ ದತ್ತಪೀಟಕ್ಕೆ ಪಯಣ ಬೆಳೆಸಿದರು.

ದತ್ತಪೀಟಕ್ಕೆ ಪಾದಯಾತ್ರೆ ಕಾರ್ಯಕ್ರಮದ ಹಿನ್ನೆಲೆ ದತ್ತಮಾಲೆ ತೊಟ್ಟ ಕಾರ್ಯಕರ್ತರು ಸೋಮವಾರ ಸಂಜೆ ಸಂಪ್ರದಾಯದAತೆ ಪಟ್ಟಣದ ಮನೆಗಳಿಗೆ ತೆರಳಿ ಭಿಕ್ಷಾಟನೆ ಮಾಡಿದರು. ಮಂಗಳವಾರ ಬೆಳಿಗ್ಗೆ ಪಟ್ಟಣದ ಶ್ರೀ ಚಂದ್ರಮೌಳೇಶ್ವರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ದತ್ತಮಾಲೆ ಕಾರ್ಯಕರ್ತರು ಬಳಿಕ ಕೆಆರ್‌ಸಿ ವೃತ್ತದಲ್ಲಿರುವ ಬನ್ನಿಮಂಟಪದಲ್ಲಿ ಪೂಜೆ ಸಲ್ಲಿಸಿದರು. ತದನಂತರ ದತ್ತಮಾಲೆಧಾರಿಗಳು ಕೊಡ್ಲಿಪೇಟೆ ಮಾರ್ಗವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ದತ್ತಪೀಟಕ್ಕೆ ಪಾದಯಾತ್ರೆ ಬೆಳೆಸಿದರು.