ಮಡಿಕೇರಿ, ಡಿ. ೨೬: ಮೈಸೂರು ವಿಜಯನಗರದಲ್ಲಿ ಕೊಡಗು ಗೌಡ ಸಮಾಜದ ವತಿಯಿಂದ ನೂತನವಾಗಿ ನಿರ್ಮಿಸಿರುವ ನೂತನ ಸಭಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಮೈಸೂರು ಕೊಡಗು ಗೌಡ ಸಮಾಜ ಅಧ್ಯಕ್ಷ ತೋಟಂಬೈಲು ಈ. ಮನೋಹರ್, ಮಾಜಿ ಶಾಸಕ ಎಲ್. ನಾಗೇಂದ್ರ, ಮಡಿಕೇರಿ ಕೊಡಗು ಗೌಡ ಸಮಾಜದ ಅಧ್ಯಕ್ಷ ಸೂರ್ತಲೆ ಆರ್. ಸೋಮಣ್ಣ, ಮಾಜಿ ನಗರ ಪಾಲಿಕೆ ಸದಸ್ಯ ಕೆ.ವಿ. ಶ್ರೀಧರ್, ಉದ್ಯಮಿಗಳು ಹಾಗೂ ಸಭಾಂಗಣ ವೇದಿಕೆಯ ದಾನಿಗಳಾದ ತೇನನ ರಾಜೇಶ್, ಕೇಕಡ ನಂದ, ಕೊಡಗು ಗೌಡ ಸಮಾಜದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.