ಮಡಿಕೇರಿ, ಡಿ. ೨೬: ಮೇಕೇರಿಯ ಸ್ವಾಗತ ಯುವಕ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದೊಂದಿಗೆ ಉತ್ತಮ ಆಡಳಿತ ದಿನದ ಪ್ರಯುಕ್ತ ೧೨ನೇ ವರ್ಷದ ಗ್ರಾಮೀಣ ಮಟ್ಟದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮೇಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾ. ೨೯ರಂದು ಬೆಳಿಗ್ಗೆ ೧೦ ಗಂಟೆಯಿAದ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಪಾಲ್ಗೊಳ್ಳಲಿದ್ದು, ಈ ಬಾರಿಯ ವಿಶೇಷವಾಗಿ ಮೂಲತಃ ಮೇಕೇರಿ ಗ್ರಾಮದ ನಿವಾಸಿಯಾದ ಪೊಲೀಸ್ ಇಲಾಖೆ ಸಿಬ್ಬಂದಿಯಾಗಿರುವ, ೫೦ನೇ ಬಾರಿ ರಕ್ತದಾನ ಮಾಡುತ್ತಿರುವ ರಕ್ತದಾನಿ ಬಿ.ಎಂ ರಾಮಪ್ಪ ಅವರನ್ನು ಸನ್ಮಾನಿಸಲಾಗುತ್ತದೆ. ಇದರೊಂದಿಗೆ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ಕಾರ್ಮಿಕ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಡ್ ನೋಂದಾವಣೆ ಕಾರ್ಯಕ್ರಮ ಆಯೋಜಿಸಲಾಗಿದೆ.