ಮಡಿಕೇರಿ, ಡಿ. ೨೬: ಕೊಡಗು ಸಂಪಾಜೆ ವ್ಯಾಪ್ತಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಸಭೆಯನ್ನು ಸಂಘದ ಅಧ್ಯಕ್ಷರಾದ ದಯಾನಂದ್ ಚೆದ್ಕಾರ್ ಅವರ ಅಧ್ಯಕ್ಷತೆಯಲ್ಲಿ ಶಾಲಾ ವಠಾರದಲ್ಲಿ ನಡೆಸಲಾಯಿತು. ಸಂಘದ ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಚರ್ಚೆಗಳು ನಡೆದು, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಉದಯ ಹನಿಯಡ್ಕ, ಉಪಾಧ್ಯಕ್ಷರಾಗಿ ರಣ್ ಕುಮಾರ್ ಬಾಲಂಬಿ, ಪ್ರಧಾನ ಕಾರ್ಯದರ್ಶಿಯಾಗಿ ಶಭರೀಶ್ ಕುದ್ಕುಳಿ, ಸಹ ಕಾರ್ಯದರ್ಶಿಯಾಗಿ ಅಶ್ವಥ್ ಕುಂಟಿಕಾನ, ಖಜಾಂಚಿಯಾಗಿ ಪ್ರವೀಣ್ ಕೂಟೇಲ್ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಮಾಜಿ ಅಧ್ಯಕ್ಷರುಗಳು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಧರ್ ಪಡ್ಪು ಹಾಗೂ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.