ಗುಡ್ಡೆಹೊಸೂರು, ಡಿ. ೨೬: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಸರಕಾರಿ ಪ್ರೌಢಶಾಲೆಯಲ್ಲಿ ಕ್ರೀಡೋತ್ಸವ ಮತ್ತು ವಾರ್ಷಿಕೋತ್ಸವವನ್ನು ಆಚರಿಸ ಲಾಯಿತು.
ಕಾರ್ಯಕ್ರಮದಲ್ಲಿ ಮೊದಲಿಗೆ ಧ್ವಜಾರೋಹಣವನ್ನು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ಆರ್. ಮಾದಪ್ಪ ಅವರು ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಸಿ. ರುಕ್ಮಿಣಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಕುಡೆಕ್ಕಲ್ ನಿತ್ಯನಂದ ಅವರು ಸ್ಥಳೀಯ ಗಣಪತಿ ದೇವಸ್ಥಾನದಿಂದ ತಂದಿದ್ದ ಕ್ರೀಡಾ ಜ್ಯೋತಿಯನ್ನು ಸ್ವೀಕಾರ ಮಾಡಿದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್. ಮಲ್ಲೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಗತಿಪರ ರೈತ ಬಿ.ಎಸ್. ಧನಪಾಲ್ ಅವರು ಪಂದ್ಯಾಟದ ಉದ್ಘಾಟನೆ ಮಾಡಿದರು. ವೇದಿಕೆಯಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ವಸಂತ ಮತ್ತು ಸದಸ್ಯರು ಹಾಜರಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಲಕ್ಷö್ಮಣ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಶಿಕ್ಷಕ ವೃಂದ ಮತ್ತು ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.