ಮುಳ್ಳೂರು, ಡಿ. ೨೬: ವಿದ್ಯಾರ್ಥಿಗಳು ರಾಷ್ಟçದ ಭವಿಷ್ಯವನ್ನು ಬರೆಯುವ ರೂವಾರಿಗಳಾಗಬೇಕು ಎಂದು ಅಂಕನಹಳ್ಳಿ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಜಿ.ಎಂ.ಹೇಮAತ್ ಅಭಿಪ್ರಾಯ ಪಟ್ಟರು. ಅವರು ಸಮೀಪದ ಶನಿವಾರಸಂತೆ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಪೋಷಕರು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ನೂರಾರು ಕನಸುಗಳನ್ನು ಹೊತ್ತಿರುತ್ತಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪೋಷಕರ ಕನಸನ್ನು ಸಾಕಾರಗೊಳಿಸುವ ಸಲುವಾಗಿ ವಿದ್ಯಾಭ್ಯಾಸ ಕಡೆಗೆ ಹೆಚ್ಚಾಗಿ ಗಮನ ಹರಿಸಬೇಕು ಇದರ ಜೊತೆಯಲ್ಲಿ ಶಿಸ್ತು, ಸಂಯಮ, ಕೌಶಲ್ಯ, ಸೃಜನಶೀಲತೆಯನ್ನು ಅಳವಡಿಸಿಕೊಳ್ಳಬೇಕೆಂದರು.

ಮೈಸೂರು ಥಾಮಸ್ ಎಜುಕೇಶನ್ ಸಂಸ್ಥೆಯ ಅಧ್ಯಕ್ಷ ಅಗಷ್ಟಿನ್ ಪಯಂಪಳ್ಳಿ ಮಾತನಾಡಿ, ವಿದ್ಯಾಸಂಸ್ಥೆಯ ಬೆಳವಣಿಗೆಯಲ್ಲಿ ಪೋಷಕರ ಸಹಕಾರ ಪ್ರಮುಖವಾಗಿ ರುತ್ತದೆ ಈ ದಿಸೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಸದರಿ ವಿದ್ಯಾಸಂಸ್ಥೆಯ ಅತ್ಯುನ್ನತ್ತ ಬೆಳವಣಿಗೆÀಗೆ ಪೋಷಕರ ಸಹಕಾರ, ಪ್ರೋತ್ಸಾಹ ಕಾರಣವಾಗಿದೆ ಅಲ್ಲದೆ ಈ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿರುವ ಅನೇಕ ವಿದ್ಯಾರ್ಥಿಗಳು ಉನ್ನತ್ತ ಹುದ್ದೆಯನ್ನು ಅಲಂಕರಿಸಿ ದ್ದಾರೆ ಎಂದು ಶ್ಲಾಘಿಸಿದರು.

ಶನಿವಾರಸಂತೆ ಕ್ಲಸ್ಟರ್ ಸಿಆರ್‌ಪಿ ಸಿ.ಕೆ.ದಿನೇಶ್, ವಿದ್ಯಾಸಂಸ್ಥೆಯ ಪ್ರಾಂಶುಪಾಲ ಸೆಬಾಸ್ಟೆನ್ ಮೈಕಲ್ ಮಾತನಾಡಿದರು. ಸಮಾರಂಭದಲ್ಲಿ ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷೆ ಗೀತಾ ಹರೀಶ್, ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣ ಸಂಯೋಜಕ ಎಚ್.ಆರ್.ಶೇಖರ್ ವಿದ್ಯಾಸಂಸ್ಥೆ ವ್ಯವಸ್ಥಾಪಕ ಸಿ.ಸಿ.ಫ್ರಾನ್ಸಿಸ್ ಮುಂತಾದ ವರು ಹಾಜರಿದ್ದರು. ವಾರ್ಷಿಕೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಲರವ ನಡೆಯಿತು.

-ಭಾಸ್ಕರ್ ಮುಳ್ಳೂರು