ನಾಪೋಕ್ಲು, ಡಿ. ೨೬: ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಸಂಜೀವಿನಿ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಗ್ರಾಮೀಣ ಕ್ರೀಡಾಕೂಟ ಹಾಗೂ ಅಂತರಗ್ರಾಮ ಹಾಕಿ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಬಲ್ಲಮಾವಟಿ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಅಂತಿಮ ಪಂದ್ಯದಲ್ಲಿ ನೆಲಜಿ -ಎ ತಂಡದ ವಿರುದ್ಧ ಆಟವಾಡಿದ ಬಲ್ಲಮಾವಟಿ ತಂಡವು ೧-೦ ಅಂತರದಿAದ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪೇರೂರು-ಎ ತಂಡ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ಹಾಕಿ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಕಾಫಿ ಬೆಳೆಗಾರ ಮೂವೇರ ನಾಣಪ್ಪ ನೀಡಿದ ರೋಲಿಂಗ್ ಟ್ರೋಫಿ ಹಾಗೂ ಅಪ್ಪಚೆಟ್ಟೋಳಂಡ ಕುಟುಂಬ ನೀಡಿದ ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು. ದ್ವಿತೀಯ ಪಂದ್ಯದಲ್ಲಿ ನೆಲಜಿ -ಎ ತಂಡದ ವಿರುದ್ಧ ಆಟವಾಡಿದ ಬಲ್ಲಮಾವಟಿ ತಂಡವು ೧-೦ ಅಂತರದಿAದ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪೇರೂರು-ಎ ತಂಡ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ಹಾಕಿ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಕಾಫಿ ಬೆಳೆಗಾರ ಮೂವೇರ ನಾಣಪ್ಪ ನೀಡಿದ ರೋಲಿಂಗ್ ಟ್ರೋಫಿ ಹಾಗೂ ಅಪ್ಪಚೆಟ್ಟೋಳಂಡ ಕುಟುಂಬ ನೀಡಿದ ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು. ದ್ವಿತೀಯ ನೀಡಿದ ನಗದು ಬಹುಮಾನವನ್ನು ನೀಡಲಾಯಿತು. ಪೇರೂರು-ಎ ತಂಡವು ದ್ವಿತೀಯ ಬಹುಮಾನವನ್ನು ಪಡೆದುಕೊಂಡಿತು. ಈ ತಂಡಕ್ಕೆ ನೆರವಂಡ ದರ್ಶನ್ ನೀಡಿದ ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು.
ಅಂತರ ಗ್ರಾಮ ಹಾಕಿ ಟೂರ್ನಿಯಲ್ಲಿ ಏಳು ತಂಡಗಳು ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಐದು ತಂಡಗಳು ಪಾಲ್ಗೊಂಡಿದ್ದವು. ಹಾಕಿ ಟೂರ್ನಿಯ ತೀರ್ಪುಗಾರರಾಗಿ ಹಾಕಿ ಕೂರ್ಗ್ ನ ತೀರ್ಪುಗಾರರಾದ ಕರವಂಡ ಅಪ್ಪಣ್ಣ ತಂಡ ಕಾರ್ಯ ನಿರ್ವಹಿಸಿದರು. ಟೂರ್ನಿಯ ಉತ್ತಮ ಆಟಗಾರ ಪ್ರಶಸ್ತಿಯನ್ನು ಅಪ್ಪಚೆಟ್ಟೋಳಂಡ ಅಯ್ಯಪ್ಪ ಪಡೆದುಕೊಂಡರು. ಅಪ್ಪಚೆಟ್ಟೋಳಂಡ ಅಯ್ಯಪ್ಪ, ತಾಪಂಡ ಅಪ್ಪಣ್ಣ ಟೂರ್ನಿಯ ಯಶಸ್ಸಿಗೆ ಸಹಕರಿಸಿದರು.
ಅತಿಥಿಗಳಾಗಿ ನೇತಾಜಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಪ್ರಮುಖರಾದ ನೆರವಂಡ ಬೇಬಿ ಈರಪ್ಪ, ನೆರವಂಡ ಮೀರಾ ಮಂದಣ್ಣ ಪಾಲ್ಗೊಂಡು ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿ ವಿಜೇತರರಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭ ಬಲ್ಲಮಾವಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಪಿ. ಶಾಂತಿ, ಮಾಜಿ ಅಧ್ಯಕ್ಷ ಮಣವಟ್ಟಿರ ಹರೀಶ್ ಕುಶಾಲಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಮಚ್ಚುರ ರವೀಂದ್ರ, ಮುಕ್ಕಾಟಿರ ಸುತನ್ ಸುಬ್ಬಯ್ಯ, ಬಾಳೆಯಡ ದೀನಾ ಮಾಯಮ್ಮ, ಗ್ರಾಮೀಣ ಕ್ರೀಡಾಕೂಟದ ಅಧ್ಯಕ್ಷ ಬಾಬಿ ಭೀಮಯ್ಯ ಪಿಡಿಓ ಶರತ್ ಪೂಣಚ್ಚ, ಟ್ರೋಫಿ ದಾನಿಗಳಾದ ಮೂವೇರ ಸಿ.ನಾಣಪ್ಪ, ಮಂಡಿರ ಜಯದೇವಯ್ಯ ಗ್ರಾಮಸ್ಥರು ಪಾಲ್ಗೊಂಡಿದ್ದರು.