ಕೋವಿಡ್ ಬಂದರೆ ೭ ದಿನ ಹೋಂ ಐಸೊಲೇಷನ್ ಕಡ್ಡಾಯ
ಬೆಂಗಳೂರು, ಡಿ. ೨೬: ಕೊರೊನಾ ಬಂದರೆ ರೋಗಿಗಳು ೭ ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಹಾಗೆಂದು ಜನರು ಆತಂಕಪಡುವ ಅಗತ್ಯವಿಲ್ಲ, ಕಾಳಜಿ ವಹಿಸಿಕೊಳ್ಳಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೋವಿಡ್ ಸಂಪುಟ ಉಪಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೋವಿಡ್ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಿದರು. ಹೊಸ ವರ್ಷ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ. ಜನರೇ ಜನದಟ್ಟಣಿಯಲ್ಲಿ ಸೇರದಂತೆ ತಮ್ಮನ್ನು ತಾವು ಸಾಧ್ಯವಾದಷ್ಟು ನಿರ್ಬಂಧ ಹೇರಿಕೊಳ್ಳಿ. ಜ್ವರ, ಕೆಮ್ಮು, ನೆಗಡಿ, ಶೀತ, ಗಂಟಲು ನೋವು ಬಂದರೆ ಮನೆಯಲ್ಲಿಯೇ ಉಳಿದುಕೊಳ್ಳಿ. ಇದು ಖಾಸಗಿ ವಲಯಕ್ಕೂ ನಿಯಮ ಅನ್ವಯವಾಗುತ್ತದೆ, ಕಡ್ಡಾಯವಾಗಿ ಉದ್ಯೋಗಿಗಳಿಗೆ ಕೋವಿಡ್ ರಜೆ ನೀಡಬೇಕು ಎಂದರು. ಕೋವಿಡ್ ಲಕ್ಷಣಗಳು, ಜ್ವರ, ಕೆಮ್ಮು ಮಕ್ಕಳಲ್ಲಿ ಕಂಡುಬAದರೆ ಶಾಲೆಗೆ ಕಳುಹಿಸದೇ ಇರುವುದು ಉತ್ತಮ, ಮಕ್ಕಳಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ನಿರ್ಬಂಧ ಹಾಕುವುದು ಉತ್ತಮ. ಹೊರಗೆ ಓಡಾಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಿ. ಶುಚಿತ್ವ ಕಾಪಾಡಿ, ಸ್ಯಾನಿಟೈಸರ್ ಬಳಸಿ ಎಂದರು. ರಾಜ್ಯದಲ್ಲಿ ಜೆಎನ್.೧ ಉಪತಳಿ ಹೆಚ್ಚಾಗುವ ಸಾಧ್ಯತೆಗಳಿವೆ. ನಿನ್ನೆಯ ೬೦ ಸ್ಯಾಂಪಲ್ಸ್ನಲ್ಲಿ ೩೪ ಜೆಎನ್.೧ ಪ್ರಕರಣಗಳು ಪತ್ತೆಯಾಗಿವೆ. ಟೆಸ್ಟ್ ಹೆಚ್ಚಿಗೆ ಮಾಡಿದಷ್ಟು ಸ್ಪೆçಡಿಂಗ್ ಗೊತ್ತಾಗುತ್ತೆ. ಹೀಗಾಗಿ ಇಂದಿನಿAದ ನಿತ್ಯ ೫ ಸಾವಿರ ಟೆಸ್ಟ್ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಹಿಂದೆ ಆದ ತಪ್ಪು ಆಗಬಾರದು ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಇದು ಆಶ್ಚರ್ಯಪಡುವ ವಿಚಾರ ಅಲ್ಲ. ಇದು ನಿರೀಕ್ಷೆ ಮಾಡಲಾಗಿತ್ತು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ರಿಸ್ಕ್ ಫ್ಯಾಕ್ಟರಿ ಅಡೈಸರಿ ಬಂದಿಲ್ಲ. ಇದು ಸಮಾಧಾನಕರ ವಿಚಾರ. ಆದರೂ ಎಚ್ಚರಿಕೆ ಅಗತ್ಯ ಎಂದು ಹೇಳಿದರು. ಐಸಿಯು ಪರಿಶೀಲನೆ ನಡೆಸಲಿದ್ದೇವೆ. ಆಕ್ಸಿಜನ್ ಸಪ್ಲೈ, ಎಲ್ಎಂಒ ರಾಜ್ಯದಲ್ಲಿ ಸಜ್ಜುಗೊಳಿಸಲು ತಿಳಿಸಲಾಗಿದೆ. ಆಕ್ಸಿಜನ್ ಕೊರತೆಯಾಗದಂತೆ ಎಚ್ಚರವಹಿಸಲು ಸೂಚಿಸಲಾಗಿದೆ. ೪೩೬ ಪಾಸಿಟಿವ್ ಪ್ರಕರಣಗಳ ಪೈಕಿ ೪೦೦ ಜನ ಹೋಂ ಐಸೋಲೇಷನ್ನಲ್ಲಿದ್ದಾರೆ. ೭ ಜನ ಐಸಿಯುನಲ್ಲಿದ್ದಾರೆ. ಖುದ್ದು ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ಟ್ರ್ಯಾಕಿಂಗ್ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲು
ಮಂಡ್ಯ, ಡಿ. ೨೬: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಸಂಬAಧ ಹೋರಾಟಗಾರ್ತಿ ನಝ್ಮಾ ನಝೀರ್ ಚಿಕ್ಕನೇರಳೆ ಅವರು ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಜಾಮೀನು ರಹಿತ ಸೆಕ್ಷನ್ಗಳಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಕಳೆದ ಭಾನುವಾರ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ದೂರು ನೀಡಿರುವ ನಝ್ಮಾ ನಝೀರ್, ಮಹಿಳೆಯರ ಖಾಸಗಿತನ, ಮಹಿಳೆಯನ್ನು ಲೈಂಗಿಕವಾಗಿ ನಿಂದಿಸುವ, ಮಹಿಳೆಯ ಮೇಲೆ ಸಾರ್ವಜನಿಕರು ಬಲಪ್ರಯೋಗಿಸುವಂತೆ ಪ್ರಚೋದಿಸುವ, ಮಹಿಳೆಗೆ ಲೈಂಗಿಕ, ಜೀವ ಬೆದರಿಕೆ ಒಡ್ಡುವ, ಮಹಿಳೆಯರ ಖಾಸಗಿ ವಿಷಯವನ್ನು ಅಶ್ಲೀಲಗೊಳಿಸುವಿಕೆ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಗ್ಗೆ ಅಶ್ಲೀಲವಾಗಿ ಪ್ರಭಾಕರ್ ಭಟ್ ಮಾತನಾಡಿದ್ದಾರೆ, ಇದು ಮಹಿಳೆಯರ ಘನತೆಗೆ ಅಡ್ಡಿಯಾದ ಪ್ರಕರಣವಾದ್ದರಿಂದ ಐಪಿಸಿ ಸೆಕ್ಷನ್ ೨೯೪, ೩೫೪, ೫೦೯, ೫೦೬, ಪ್ರಕಾರ ಅಪರಾಧವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ ಎಂದು ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪಕ್ಷದಿಂದ ಉಚ್ಚಾಟಿಸಿದರೆ ಅವ್ಯವಹಾರದ ದಾಖಲೆ ಬಿಡುಗಡೆ
ಬೆಂಗಳೂರು, ಡಿ. ೨೬: ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿಯ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದರೆ ೪೦ ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ ಎಂದು ಮಂಗಳವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸತ್ಯ ಹೇಳಿದರೆ ಎಲ್ಲರಿಗೂ ಭಯವಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ೪೦ ಸಾವಿರ ಕೋಟಿ ರೂಪಾಯಿಯ ಅವ್ಯವಹಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ನಾನು ಪ್ರಧಾನಿ ಮೋದಿ ಅವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ ಎಂದು ಯತ್ನಾಳ್ ಸವಾಲು ಹಾಕಿದ್ದಾರೆ. ೪೫ ರೂಪಾಯಿ ಮಾಸ್ಕ್ ಗೆ ೪೮೫ ರೂಪಾಯಿ ಬಿಲ್ ಹಾಕಿದ್ದಾರೆ. ಬೆಡ್ಗಳಿಗೆ ಒಂದು ದಿನಕ್ಕೆ ೧೦ ಸಾವಿರ ರೂಪಾಯಿ ಬಾಡಿಗೆ ನೀಡಿದ್ದಾರೆ. ಖರೀದಿ ಮಾಡಿದರೆ ಒಂದು ದಿನದ ಬಿಲ್ನಲ್ಲಿ ಎರಡು ಬೆಡ್ ಬರ್ತಿದ್ದವು. ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದಿದ್ದಾರೆ. ನಮ್ಮ ಸರ್ಕಾರ ಇದ್ರೆ ಏನು ಆಯ್ತು? ಕಳ್ಳರು ಕಳ್ಳರೇ ಅಲ್ವಾ? ನನಗೆ ಆಸ್ಪತ್ರೆಯಲ್ಲಿ ೫ ಲಕ್ಷ ರೂಪಾಯಿ ಬಿಲ್ ಹಾಕಿದರು. ಇನ್ನು ಬಡವರು ಏನು ಮಾಡಬೇಕು. ಕೊರೊನಾ ವೇಳೆ ಕೋಟಿ ಕೋಟಿ ಲೂಟಿ ಆಗಿದೆ. ಜನವರಿ ೫ಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಕೇಸ್ ಹೈಕೋರ್ಟ್ನಲ್ಲಿ ವಿಚಾರಣೆಗೆ ಬರಲಿದೆ. ಅವರ ನಂತರ ಅಪ್ಪಾಜಿಯದ್ದೇ ಹೊರ ತೆಗೆಯುತ್ತೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ತನಿಖೆಗೆ ಒತ್ತಾಯಿಸುವುದಾಗಿ ಎಂದು ಹೇಳಿದ್ದಾರೆ.