ಕುಶಾಲನಗರ, ಡಿ. ೨೬: ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಪ್ರವಾಸಿಗರ ದಟ್ಟಣೆ ಅಧಿಕಗೊಂಡ ಹಿನ್ನೆಲೆಯಲ್ಲಿ ನಾಲ್ಕನೇ ದಿನವಾದ ಮಂಗಳವಾರ ಕೂಡ ಕುಶಾಲನಗರ-ಕೊಪ್ಪ ಗಡಿಭಾಗದಲ್ಲಿ ವಾಹನ ಸಂಚಾರಕ್ಕೆ ತೊಡಕು ಉಂಟಾಯಿತು.
ಕುಶಾಲನಗರ ಮೂಲಕ ಹಾದು ಹೋಗುವ ಹೆದ್ದಾರಿಯಲ್ಲಿ ಮಧ್ಯಾಹ್ನ ವೇಳೆ ಮೂರು ಗಂಟೆಗಳ ಕಾಲ ದಾರಿ ಉದ್ದಕ್ಕೂ ವಾಹನಗಳ ಸರತಿ ಸಾಲುಗಳು ಕಂಡುಬAದವು. ಈ ನಡುವೆ ಕುಶಾಲನಗರ ಕೊಪ್ಪ ಕಾವೇರಿ ಸೇತುವೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ಸು ತಾಂತ್ರಿಕ ಕಾರಣದಿಂದ ಕೆಟ್ಟು ನಿಂತು ಹೆದ್ದಾರಿ ವಾಹನ ಸಂಚಾರಕ್ಕೆ ಸುಮಾರು ಮೂರು ಗಂಟೆಗಳ ಕಾಲ ಅಡ್ಡಿ ಉಂಟಾದ ದೃಶ್ಯ ಕಂಡು ಬಂತು.