ಸೋಮವಾರಪೇಟೆ, ಡಿ. ೨೬: ವನ್ಯಜೀವಿ ವಿಭಾಗದ ಪುಷ್ಪಗಿರಿ ವನ್ಯಜೀವಿ ವಲಯದ ವತಿಯಿಂದ ಚಿಣ್ಣರ ವನದರ್ಶನ ಕಾರ್ಯಕ್ರಮದ ಅಂಗವಾಗಿ ಹರಪಳ್ಳಿ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಒಂದು ದಿನದ ವನದರ್ಶನ ಪ್ರವಾಸ ಹಮ್ಮಿಕೊಳ್ಳಲಾಗಿತ್ತು.

ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೋಮವಾರಪೇಟೆ, ಡಿ. ೨೬: ವನ್ಯಜೀವಿ ವಿಭಾಗದ ಪುಷ್ಪಗಿರಿ ವನ್ಯಜೀವಿ ವಲಯದ ವತಿಯಿಂದ ಚಿಣ್ಣರ ವನದರ್ಶನ ಕಾರ್ಯಕ್ರಮದ ಅಂಗವಾಗಿ ಹರಪಳ್ಳಿ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಒಂದು ದಿನದ ವನದರ್ಶನ ಪ್ರವಾಸ ಹಮ್ಮಿಕೊಳ್ಳಲಾಗಿತ್ತು.

ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜೀವವೈವಿಧ್ಯದ ಬಗ್ಗೆ ನಾಗರಹೊಳೆ ಉಪ ವಲಯ ಅರಣ್ಯಾಧಿಕಾರಿ ನವೀನ್ ರಾವತ್ ಮಾಹಿತಿ ನೀಡಿದರು. ಪುಷ್ಪಗಿರಿ ವನ್ಯಧಾಮದ ಉಪ ವಲಯ ಅರಣ್ಯಾಧಿಕಾರಿ ಪಿ.ಟಿ. ಶಶಿ ಅವರು ವಿದ್ಯಾರ್ಥಿನಿಯರಿಗೆ ಅರಣ್ಯ ಮತ್ತು ಪರಿಸರ ಪ್ರವಾಸದ ಮಹತ್ವವನ್ನು ತಿಳಿಸಿದರು. ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್ ನೇತೃತ್ವದಲ್ಲಿ ಗಸ್ತು ಅರಣ್ಯಪಾಲಕ ರಾಘವೇಂದ್ರ, ಸಿಬ್ಬಂದಿಗಳಾದ ಗಣೇಶ್, ಶಂಕರ್, ದೀಪಕ್, ಶಿಕ್ಷಕಿ ಪೂಜಾ ಸಿ.ಪಿ. ಭಾಗವಹಿಸಿದ್ದರು.