ನಾಪೋಕ್ಲು, ಡಿ. ೨೭: ಏಪ್ರಿಲ್-೨೦೨೪ ರಲ್ಲಿ ಜರುಗಲಿರುವ ಕುಂಡ್ಯೋಳAಡ ಕಪ್ ಹಾಕಿ ಉತ್ಸವದ ಲಾಂಛನ ಲೋಕಾರ್ಪಣೆ ಸಮಾರಂಭ ತಾ. ೩೧ ರಂದು ಬೆಳಿಗ್ಗೆ ೯.೩೦ ಗಂಟೆಗೆ ನಡೆಯಲಿದೆ.

ನಾಪೋಕ್ಲು ಕೊಡವ ಸಮಾಜದ ಅಪ್ಪಚ್ಚಕವಿ ಸಭಾಂಗಣದಲ್ಲಿ ಕುಂಡ್ಯೋಳAಡ ಕುಟುಂಬದ ಪಟ್ಟೆದಾರ ನಾಣಿ ನಾಣಯ್ಯ ಹಾಗೂ ಹಾಕಿ ಉತ್ಸವದ ಅಧ್ಯಕ್ಷ ಕುಂಡ್ಯೋಳAಡ ರಮೇಶ್ ಮುದ್ದಯ್ಯ ಅವರ ಮುಂದಾಳತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ .

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ಶಾಸಕ ಎ.ಎಸ್. ಪೊನ್ನಣ್ಣ, ಕರ್ನಾಟಕ ರಾಜ್ಯ ವಿಧಾನಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಒಲಂಪಿಯನ್, ಹಾಕಿ ಕರ್ನಾಟಕ ಕಾರ್ಯದರ್ಶಿ ಡಾ. ಅಂಜಪರವAಡ ಬಿ. ಸುಬ್ಬಯ್ಯ, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡAಡ ಕೆ. ಬೋಪಣ್ಣ, ವೆಸ್ಟ್ ಕೊಳಕೇರಿ ಗ್ರಾಮಾಭಿವೃದ್ಧಿ ಸಂಘದ ಅಧ್ಯಕ್ಷ ಕೇಟೋಳಿರ ಎಸ್. ಕುಟ್ಟಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.