ಗುಡ್ಡೆಹೊಸೂರು, ಡಿ. ೨೭: ವಿದ್ಯಾರ್ಥಿಗಳು ಶಿಕ್ಷಣ ದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆ ಯನ್ನು ಪ್ರದರ್ಶಿಸಬೇಕು ಎಂದು ಕೊಡಗು ಸೈನಿಕ ಶಾಲೆ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಸಲಹೆ ನೀಡಿದರು.

ಸಮೀಪದ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ಏರ್ಪಡಿಸಿದ್ದ ೨೦೨೩-೨೪ನೇ ಸಾಲಿನ ಕ್ರೀಡಾ, ಸಾಂಸ್ಕೃತಿಕ ಹಾಗೂ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಹಲವಾರು ವಿದ್ಯಾರ್ಥಿಗಳು ಕೇವಲ ಮೊಬೈಲ್, ಟಿ.ವಿ.ಗೆ ಅಂಟಿಕೊAಡಿರುತ್ತಾರೆ ಮತ್ತೆ ಕೆಲವರು ಯಾರೊಂದಿಗೂ ಬೆರೆಯದೆ ಒಬ್ಬಂಟಿಯಾಗಿರಲು ಬಯಸುತ್ತಾರೆ. ಇದನ್ನು ಬಿಟ್ಟು ಓದು ಬರಹದ ಜೊತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದರು.

ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ ಶಾಲೆಯಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಬಡ್ಡಿ, ವಾಲಿಬಾಲ್, ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂಕುಚಿತ ಮನೋಭಾವನೆ ಹೋಗಲಾಡಿಸಲು ಶಾಲಾ ವಾರ್ಷಿಕೋತ್ಸವ ಉತ್ತಮವಾದ ವೇದಿಕೆಯಾಗಿದೆ. ಚಿಕ್ಕಂದಿನಿAದಲೇ ವೇದಿಕೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಬುದ್ಧಿಶಕ್ತಿ, ಧೈರ್ಯ ಹೆಚ್ಚಿ ಭಯ ದೂರವಾಗುತ್ತದೆ ಎಂದರು. ಜ್ಞಾನಗಂಗಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕನಕರಾಜ್ ಅಧ್ಯಕ್ಷತೆ ವಹಿಸಿದ್ದರು. ಜ್ಞಾನಗಂಗಾ ಶಾಲೆಯ ಪ್ರಾಂಶುಪಾಲೆ ಪ್ರಿಯಾಂಕಾ ವಾರ್ಷಿಕ ವರದಿ ವಾಚಿಸಿದರು. ವೇದಿಕೆಯಲ್ಲಿ ಜ್ಞಾನಗಂಗಾ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಅನಂತ ಪದ್ಮನಾಭ, ಖಜಾಂಚಿ ಪುಲಿಯಂಡ ರಾಮ್ ದೇವಯ್ಯ, ಟ್ರಸ್ಟಿಗಳಾದ ಸುಧೀರ್, ನಾಗೇಂದ್ರ, ನಿಂಗಪ್ಪ, ಸುಮಿತ್ರಾ, ಶೋಭಾ, ಚರಂತ್ ಇತರರು ಇದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.