ಮಡಿಕೇರಿ, ಡಿ. ೨೭: ರಾಷ್ಟçಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ತಾ. ೨೯ ರಂದು ವಿಶ್ವಮಾನವ ದಿನಾಚರಣೆಯನ್ನು ಆಯೋಜಿಸುವ ಸಂಬAಧ ಪೂರ್ವಭಾವಿ ಸಭೆಯು ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣ ವಾಗಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ನಗರದ ಮಂಗೇರಿರ ಮುತ್ತಣ್ಣ ವೃತ್ತದ ಬಳಿ ಇರುವ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸಭಾ ಕಾರ್ಯಕ್ರಮವು ಗಾಂಧಿ ಭವನದಲ್ಲಿ ನಡೆಯಲಿದ್ದು, ನಿಯ ಮಾನುಸಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಈ ಸಂದರ್ಭ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಕುವೆಂಪು ಅವರು ವಿಶ್ವಮಾನವರಾಗಿದ್ದು, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ವೈಚಾರಿಕ ನೆಲೆಗಟ್ಟಿನಲ್ಲಿ ವಿಶ್ವಮಾನವ ದಿನಾಚರಣೆ ಬೆಳಕು ಚೆಲ್ಲುವಂತಾಗಬೇಕು ಎಂದು ಸಲಹೆ ನೀಡಿದರು.
ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮಾತನಾಡಿ, ಕುವೆಂಪು ಅವರ ಚಿಂತನೆ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಕುವೆಂಪು ಗೀತೆಗಳನ್ನು ಹಾಡುವಂತಾಗಬೇಕು ಎಂದು ಸಲಹೆಯಿತ್ತರು.
ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಮಾತನಾಡಿ, ಕುವೆಂಪು ಜನ್ಮ ದಿನದಂದು ಕುವೆಂಪು ಅವರ ಪುತ್ಥಳಿಗೆ ದೀಪಾಲಂಕಾರ ಮಾಡು ವಂತಾಗಬೇಕು ಎಂದರು. ರವಿಗೌಡ, ಪ್ರಕಾಶ್ ಆಚಾರ್ಯ, ರಾಜಶೇಖರ್, ಇತರರು ಇದ್ದರು.
ಜನವರಿ ೧ ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ನಗರದ ಗಾಂಧಿ ಭವನದಲ್ಲಿ ಆಯೋಜಿಸಲು ತೀರ್ಮಾನಿಸ ಲಾಯಿತು. ಅಮರಶಿಲ್ಪಿ ಜಕಣಾಚಾರಿ ಅವರು ಕನ್ನಡ ಕಲಾ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಸ್ಮರಣೆ ಮಾಡುವಂತಾಗಬೇಕು. ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜಿಸಲು ಅಗತ್ಯ ಕ್ರಮ ವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು.
ಅಮರಶಿಲ್ಪಿ ಜಕಣಾಚಾರಿ ಸಂಬAಧಿಸಿದAತೆ ಡಾಕ್ಯುಮೆಂಟ್ರಿ ಇದ್ದಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡುವಂತೆ ಬಿ.ಜಿ. ಅನಂತಶಯನ ಅವರು ಸಲಹೆ ನೀಡಿದರು. ಕಾರ್ಯಕ್ರಮದ ಸಂದರ್ಭ ಮಕ್ಕಳ ಪ್ರತಿಭೆಗೆ ಅವಕಾಶ ನೀಡುವಂತಾಗಬೇಕು ಎಂದರು.
ಈ ಸಂದರ್ಭ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರನ್ನು ಪೂರ್ವಭಾವಿ ಸಭೆಗೆ ಆಹ್ವಾನಿಸುವಂತೆ ತಿಳಿಸಿದರು.
ವಿಶ್ವಕರ್ಮ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಜಗದೀಶ್, ಚರಣ್, ಸುರೇಶ್, ರಕ್ಷಿತ್, ಪ್ರಕಾಶ್ ಆಚಾರ್ಯ, ಇತರರು ಇದ್ದರು.