ಶನಿವಾರಸಂತೆ, ಡಿ. ೨೭: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿಯ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸತ್ಯವತಿ ದೇವರಾಜ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಆವರಣದಲ್ಲಿ ನಡೆಯಿತು.
ಉದ್ಯೋಗ ಖಾತ್ರಿ ಯೋಜನೆಯ ತಾಲೂಕು ಅಧಿಕಾರಿ ದಿನೇಶ್ ಅವರು ಸಭೆಯಲ್ಲಿ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೩ನೇ ಸಾಲಿನ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಿಂದ ನಡೆದ ಕಾಮಗಾರಿಗಳು ಮತ್ತು ಅದರ ವೆಚ್ಚ ಹಾಗೂ ೧೫ನೇ ಹಣಕಾಸು ಯೋಜನೆಯಡಿ ನಡೆದ ಕಾಮಗಾರಿಗಳು ಮತ್ತು ವೆಚ್ಚದ ವರದಿಯನ್ನು ಮಂಡಿಸಿದರು.
ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಿಂದ ೨೦೨೩ನೇ ಸಾಲಿನಲ್ಲಿ ವಿವಿಧ ೩೦ ಕಾಮಗಾರಿಗಳನ್ನು ಅನುಷ್ಠಾನ ಮಾಡಿದ್ದು ರೂ. ೬೫,೨೮,೬೩೯ ವೆಚ್ಚವಾಗಿದೆ. ೧೫ನೇ ಹಣಕಾಸು ಯೋಜನೆಯಡಿ ಅನುದಾನದಿಂದ ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು ಇದಕ್ಕೆ ರೂ. ೨೭,೬೫,೨೭೬ ವೆಚ್ಚವಾಗಿದೆ ಎಂದು ವರದಿಯಲ್ಲಿ ತಿಳಿಸಿದರು.
ಶನಿವಾರಸಂತೆಯ ಪಶು ವೈದ್ಯಾಧಿಕಾರಿ ಡಾ. ಸತೀಶ್ ನೋಡಲ್ ಅಧಿಕಾರಿಯಾಗಿ ಪಾಲ್ಗೊಂಡು ಮಾತನಾಡಿದರು. ಗ್ರಾಮಸ್ಥರಾದ ಕೆ.ಟಿ. ಹರೀಶ್, ಪ್ರಸಾದ್, ಕಿರಣ್ ಇತರರು ಚರ್ಚೆಯಲ್ಲಿ ಪಾಲ್ಗೊಂಡು ಕೆಲವು ಸದಸ್ಯರ ಗೈರುಹಾಜರಿ ಬಗ್ಗೆ ಹಾಗೂ ಸಭೆಯಲ್ಲಿ ಗ್ರಾಮಸ್ಥರ ಸಂಖ್ಯೆ ಕಡಿಮೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ವರದಿ ಸಲ್ಲಿಸುವಂತೆ ತಿಳಿಸಿದರು. ಸದಸ್ಯರೆಲ್ಲರೂ ಒಗ್ಗಟ್ಟಾಗಿ ಗ್ರಾಮಾಭಿವೃದ್ಧಿ ಕೆಲಸ ಮಾಡುವಂತೆ ಸಲಹೆ ನೀಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯೆಷಾ, ಸದಸ್ಯರಾದ ಡಿ.ಪಿ. ಬೋಜಪ್ಪ, ಸಿ.ಜೆ. ಗಿರೀಶ್, ಮನುಮಹಾಂತೇಶ್, ಪೂರ್ಣಿಮಾ ಕಾಮಗಾರಿ ಕುರಿತ ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಿದರು.
ಪಂಚಾಯಿತಿ ಉಪಾಧ್ಯಕ್ಷೆ ಗೋಪಿಕಾ ಹರೀಶ್, ಸದಸ್ಯರಾದ ಡಿ.ಪಿ. ಬೋಜಪ್ಪ, ಸಿ.ಜೆ. ಗಿರೀಶ್, ಮನುಮಹಾಂತೇಶ್, ಪೂರ್ಣಿಮಾ ಕಿರಣ್, ಎಸ್.ಪಿ. ಭಾಗ್ಯಾ, ಭವಾನಿ, ಜಾನಕಿ, ನಂದಿನಿ, ಕಾರ್ಯದರ್ಶಿ ರವಿ ಹಾಗೂ ಸಿಬ್ಬಂದಿ ಹಾಜರಿದ್ದರು. ಪಿಡಿಓ ಆಯೆಷಾ ಸ್ವಾಗತಿಸಿ, ವಂದಿಸಿದರು.