ಪೊನ್ನಂಪೇಟೆ, ಡಿ. ೨೭: ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕದ ವಿಶೇಷ ವಾರ್ಷಿಕ ಶಿಬಿರವನ್ನು ಗೋಣಿ ಕೊಪ್ಪಲು ಕಾವೇರಿ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಆಯೋಜಿಸ ಲಾಗಿದ್ದು, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನ್ನಕ್ಕಮನೆ ಸೌಮ್ಯ ಬಾಲು ಶಿಬಿರಕ್ಕೆ ಚಾಲನೆ ನೀಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿ ಕುಲ್ಲಚಂಡ ಪಿ. ಬೋಪಣ್ಣ ಮಾತನಾಡಿ, ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುವುದರ ಜೊತೆಗೆ, ದೇಶಭಕ್ತಿ, ಸಮಾನತೆ, ಭಾವೈಕ್ಯತೆಯನ್ನು ಬೆಳೆಸುತ್ತವೆ ಎಂದರು.
ಮತ್ತೋರ್ವ ಅತಿಥಿ ಪತ್ರಕರ್ತ ಕುಪ್ಪಂಡ ದತ್ತಾತ್ರಿ ಮಾತನಾಡಿ, ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳಿಗೆ ಬದುಕಿನ ಸವಾಲುಗಳನ್ನು, ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯವನ್ನು ಕಲಿಸಿಕೊಡುವುದರ ಜೊತೆಗೆ ಉತ್ತಮ ನಾಗರಿಕರನ್ನಾಗಿ ರೂಪಿಸುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲಎಸ್.ಎಸ್. ಮಾದಯ್ಯ ಮಾತನಾಡಿ, ವೇದಿಕೆಯಲ್ಲಿ ನಿಂತು ಮಾತನಾಡುವ ಕಲೆಯನ್ನು ಎನ್.ಎಸ್.ಎಸ್. ವಿದ್ಯಾರ್ಥಿಗಳಿಗೆ ಕಲಿಸಿಕೊಡುವುದರ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸುತ್ತದೆ ಎಂದರು. ರಾಷ್ಟಿçÃಯ ಸೇವಾ ಯೋಜನಾಧಿಕಾರಿ ಕೆ.ಎಂ. ಕುಸುಮ್ ಪ್ರಾಸ್ತಾವಿಕ ನುಡಿಯಾಡಿದರು.
ಈ ಸಂದರ್ಭ ಉಪ ಪ್ರಾಂಶುಪಾಲೆ ಎಂ.ಕೆ. ಪದ್ಮ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ.ಬಿ. ಪೂವಮ್ಮ, ಸಹ ಶಿಬಿರಾಧಿಕಾರಿ ಸಚಿನ್ ನಾಯಕ್, ಉಪನ್ಯಾಸಕರು ಹಾಗೂ ಸ್ವಯಂಸೇವಕರು ಹಾಜರಿದ್ದರು. ಸ್ವಯಂ ಸೇವಕಿಯರಾದ ಗ್ರೀಷ್ಮ ಉತ್ತಪ್ಪ, ಬಿ.ವಿ. ರಚನ ಕಾರ್ಯಕ್ರಮ ನಿರೂಪಿಸಿದರು.