ಕೋವಿಡ್ ರೂಪಾಂತರ: ಮಾರ್ಗಸೂಚಿ ಪ್ರಕಟ

ಬೆಂಗಳೂರು, ಡಿ. ೨೮: ಕೋವಿಡ್ ಜೆಎನ್.೧ ರೂಪಾಂತರಕ್ಕೆ ಸಂಬAಧಿಸಿದAತೆ ರಾಜ್ಯದಲ್ಲಿ ಇದುವರೆಗೂ ೩೪ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ. ಲಭ್ಯವಿರುವ ಮಾಹಿತಿ ಪ್ರಕಾರ ಜೆಎನ್.೧ ಸೋಂಕಿನ ಹರಡುವಿಕೆ ಸಾಮರ್ಥ್ಯ ಹೆಚ್ಚಿರುವುದು ಕಂಡುಬAದಿದ್ದು ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಜನಸಂದಣಿಯಾಗುವ ಹಾಗೂ ಒಳಾಂಗಣ ಜನಸಂದಣಿ ಪ್ರದೇಶಗಳಲ್ಲಿ ಮುಂಜಾಗ್ರತವಾಗಿ ಸೂಕ್ತ ಕೋವಿಡ್ ಮಾಸ್ಕ್ ಧರಿಸಲು ಕೋರಲಾಗಿದೆ. ಅಲ್ಲದೇ, ೬೦ ವರ್ಷ ಮೇಲ್ಪಟ್ಟವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಮತ್ತು ಇತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಪ್ರಸ್ತುತ, ರಾಜ್ಯದಲ್ಲಿ ಡಿಸೆಂಬರ್ ೨೬ ರವರೆಗೆ ೪೬೪ ಸಕ್ರಿಯ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ ೩೭೬ ಪ್ರಕರಣಗಳು ವರದಿಯಾಗಿವೆ. ಒಟ್ಟು ೭೪ ಖಚಿತ ಪ್ರಕರಣಗಳಲ್ಲಿ ೫೭ ಪ್ರಕರಣಗಳು ಮತ್ತು ೯ ಮರಣ ಪ್ರಕರಣಗಳಲ್ಲಿ ೪ ಬೆಂಗಳೂರು ನಗರಕ್ಕೆ ಸೇರಿವೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಮುಂಬರುವ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನಸಂದಣಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಜನಸಂದಣಿಯಾಗುವುದನ್ನು ಗಮನದಲ್ಲಿಟ್ಟುಕೊಂಡು, ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಬಳಸುವುದರ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಲಾಗಿದೆ.

ನಾಮಫಲಕಗಳಲ್ಲಿ ಶೇ.೬೦ ಕನ್ನಡ ಭಾಷೆ ಬಳಕೆ ಕಡ್ಡಾಯ; ಫೆ. ೨೮ ಗಡುವು

ಬೆಂಗಳೂರು, ಡಿ. ೨೮: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ೨೦೨೨ರ ಸೆಕ್ಷನ್ ೧೭ (೬)ಕ್ಕೆ ತಿದ್ದುಪಡಿ ತಂದು ೨೦೨೪ರ ಫೆಬ್ರವರಿ ೨೮ ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. ೬೦ ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವ ಕುರಿತು ನಡೆದ ಉನ್ನತ ಮಟ್ಟದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ ಎಂದರು. ಈ ಕಾಯ್ದೆಯ ನಿಯಮ ೧೭(೮) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿ ಇರತಕ್ಕದ್ದು ಎಂದಿದೆ. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ. ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಕೋವಿಡ್ ಸಂಪರ್ಕಿತರ ರೋಗ ಲಕ್ಷಣದ ಪರೀಕ್ಷೆಗೆ ಸೂಚನೆ

ಬೆಂಗಳೂರು, ಡಿ. ೨೮: ರಾಜ್ಯದಲ್ಲಿ ಕೋವಿಡ್-೧೯ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಪಾಸಿಟಿವ್ ಕೇಸ್‌ಗಳ ರೋಗ ಲಕ್ಷಣದ ಸಂಪರ್ಕಿತರನ್ನು ಪರೀಕ್ಷಿಸುವುದು, ಟೆಲಿ ಐಸಿಯು ಬಳಕೆ ಮತ್ತು ಸೋಂಕಿನಿAದಾಗಿ ಸಾವನ್ನಪ್ಪಿದವರ ಲೆಕ್ಕಪರಿಶೋಧನೆ ಮುಂತಾದ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರ ಗುರುವಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೆ, ರೋಗಿಗಳಿಗೆ ಚಿಕಿತ್ಸೆ ನೀಡಲು ಕೆಲವು ಐಸಿಯು ಹಾಸಿಗೆಗಳು ಸೇರಿದಂತೆ ಕೋವಿಡ್-೧೯ ಐಸೋಲೇಷನ್ ವಾರ್ಡ್ ಸ್ಥಾಪಿಸುವಂತೆ ಸಲಹೆ ನೀಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಇಂದು ಸುತ್ತೋಲೆ ಹೊರಡಿಸಿದ್ದು, ನಿರ್ದೇಶನ ಗಳನ್ನು ಅನುಸರಿಸಲಾಗುತ್ತಿದೆ ಎಂಬುದನ್ನು ಖಾತ್ರಿಪಡಿಸಿಕೊಳ್ಳುವಂತೆ ರಾಜ್ಯ ಆರೋಗ್ಯ ಅಧಿಕಾರಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೋವಿಡ್ -೧೯ ಅನ್ನು ಮೊದಲೇ ಪತ್ತೆಹಚ್ಚಲು ಮತ್ತು ರೋಗಿಗೆ ಆರಂಭಿಕ ಚಿಕಿತ್ಸೆಯನ್ನು ಪ್ರಾರಂಭಿಸಲು ಪರೀಕ್ಷೆ ಆಧಾರವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಹಿಂದೆ ನೀಡಲಾದ ಉದ್ದೇಶಿತ ಪರೀಕ್ಷಾ ಮಾನದಂಡಗಳ ಜೊತೆಗೆ, ಎಲ್ಲಾ ರೋಗಲಕ್ಷಣದ ನಿಕಟ ಸಂಪರ್ಕಿತರನ್ನು ಸಹ ಕೋವಿಡ್ ೧೯ ಗಾಗಿ ಪರೀಕ್ಷಿಸಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಪ್ರಸ್ತುತ ಸುಮಾರು ೪೦೦ ಕೋವಿಡ್ -೧೯ ರೋಗಿಗಳು ಹೋಮ್ ಐಸೊಲೇಶನ್‌ನಲ್ಲಿದ್ದಾರೆ. ಕೆಲವರು ಆಸ್ಪತ್ರೆಗಳಲ್ಲಿ ಸಾಮಾನ್ಯ ಪ್ರತ್ಯೇಕ ವಾರ್ಡ್ಗಳಲ್ಲಿ ದಾಖಲಾಗಿದ್ದಾರೆ. ಹೋಮ್ ಐಸೊಲೇಶನ್ ನಲ್ಲಿರುವ ಮತ್ತು ಸಾಮಾನ್ಯ ವಾರ್ಡ್ಗಳಲ್ಲಿ ದಾಖಲಾಗಿರುವ ಕೋವಿಡ್-೧೯ ರೋಗಿಗಳ ವೈದ್ಯಕೀಯ ಸ್ಥಿತಿ ಮತ್ತು ರೋಗ ಲಕ್ಷಣಗಳನ್ನು ನಿರ್ಣಯಿಸಲು ಮತ್ತು ಚಿಕಿತ್ಸೆಗಾಗಿ ಮುಂದಿನ ಕ್ರಮಗಳನ್ನು ಸೂಚಿಸಲು, ಪಿಹೆಚ್‌ಸಿ-ಯುಪಿಹೆಚ್‌ಸಿ ನಮ್ಮ ಚಿಕಿತ್ಸಾಲಯಗಳ ವೈದ್ಯರು-ಅರೆವೈದ್ಯಕೀಯ ಸಿಬ್ಬಂದಿಗಳು ಅವರಿರುವಲ್ಲಿಗೆ ಒಮ್ಮೆಯಾದರು ಭೇಟಿ ನೀಡುತ್ತಾರೆ ಎಂದು ತಿಳಿಸಿದೆ.