ಮಡಿಕೇರಿ, ಡಿ. ೨೭: ಟ್ವಿಟರ್ ಖಾತೆಯಲ್ಲಿ ಅಶ್ಲೀಲ ಹಾಗೂ ಪ್ರಚೋದನಕಾರಿ ಸಂದೇಶ ಹಾಕಿದ ಯುವಕನನ್ನು ಪೊಲೀಸರು ಬಂದಿಸಿದ್ದಾರೆ.
ಏoಞi @ Shಚಿಥಿಚಿಟಿ ಎಂಬ ಟ್ವಿಟರ್ ಖಾತೆಯಲ್ಲಿ ಅಶ್ಲೀಲ ಪ್ರಚೋದನಕಾರಿ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿತ್ತು. ಈ ಕುರಿತು ಜಿಲ್ಲಾ ಪೊಲೀಸ್ ಸೋಷಿ ಯಲ್ ಮೀಡಿಯಾ ಮಾನಿಟರಿಂಗ್ ಸೆಲ್ನ ಅಧಿಕಾರಿ, ಸಿಬ್ಬಂದಿ ನೀಡಿದ ಮಾಹಿತಿಯನ್ವಯ ಇಂತಹ ಸಂದೇಶದಿAದ ಸಾರ್ವಜನಿ ಕರು ಪ್ರಚೋದನೆಗೆ ಒಳಗಾಗಿ ಸಮಾಜದ ಸ್ವಾಸ್ಥö್ಯ ಹದಗೆಡುವ ಸಾಧ್ಯತೆ ಇರುವುದರಿಂದ ಏoಞi @ Shಚಿಥಿಚಿಟಿ ಎಂಬ ಹೆಸರಿನ ಟ್ವಿಟರ್ ಖಾತೆ ಮೂಲ ಅಶ್ಲೀಲವಾಗಿ ಪೋಸ್ಟ್ ಮಾಡಿದ್ದ ಬಾಳೆಲೆ ನಿವಾಸಿ ಶಯನ್ (೨೦) ಎಂಬಾತನನ್ನು ಪೊನ್ನಂಪೇಟೆ ಪೊಲೀಸರು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.
೨೦೨೪ರ ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆ, ಹೊರಜಿಲ್ಲೆ, ಹೊರ ರಾಜ್ಯಗಳಿಂದ ಪ್ರವಾಸದ ನಿಮಿತ್ತ ಆಗಮಿಸಿ ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ಗಳಲ್ಲಿ ತಂಗಲು ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕರು, ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಸ್ವಾಸ್ಥö್ಯ ಹದಗೆಡುವ ರೀತಿಯ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಕುರಿತು ಪೋಸ್ಟ್ ಮಾಡುವ ಸುಳ್ಳು ಸಂದೇಶಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಹಾಗೂ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ನಡೆಸುತ್ತಿರುವುದು ಕಂಡುಬAದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿ ಸಂಖ್ಯೆ : ೦೮೨೭೨-೨೨೮೩೦೦, ೯೪೮೦೮೦೪೯೦೦ ಕ್ಕೆ ಕರೆ ಮಾಡಿ ಮಾಹಿತಿ ಒದಗಿಸಬೇಕು.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ಗಳಲ್ಲಿ ಸಮಾಜದ ಸ್ವಾಸ್ಥö್ಯ ಹದಗೆಡುವ ಯಾವುದೇ ರೀತಿಯ ಅನೈತಿಕ ಅಕ್ರಮ ಚಟುವಟಿಕೆಗಳು ನಡೆಸುತ್ತಿರುವ ಕುರಿತು ಭಾವಚಿತ್ರ, ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊAಡಿರುವ ಬಗ್ಗೆ ಸಾರ್ವಜನಿಕರು ಸ್ಥಳೀಯ ಪೊಲೀಸ್ ಠಾಣೆ, ತುರ್ತು ಸಹಾಯವಾಣಿ ೧೧೨ ಗೆ ಕರೆ ಮಾಡಿ ಅಥವಾ ಕೆಎಸ್ಪಿ ತಂತ್ರಾAಶದ ಮೂಲಕ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.