ಮಡಿಕೇರಿ, ಡಿ. ೨೭: ಸರ್ಕಾರ ಸಹಕಾರ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದು, ಆ ನಿಟ್ಟಿನಲ್ಲಿ ಹೊಸ ಹೊಸ ಯೋಜನೆ ಅಳವಡಿಸಿಕೊಂಡು ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಮತ್ತು ಆಡಳಿತ ವ್ಯವಸ್ಥೆಯನ್ನು ಸುಧಾರಿಸಲು ಅಗತ್ಯ ಕ್ರಮವಹಿಸಬೇಕು ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನಿರ್ದೇಶಕ ಎ.ಕೆ. ಮನು ಮುತ್ತಪ್ಪ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯರ್ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಕೃಷಿಯೇತರ ಮತ್ತು ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ಆದಾಯ ತೆರಿಗೆ, ಜಿಎಸ್ಟಿ ಮತ್ತು ಸಹಕಾರ ಸಂಘಗಳ ಆಡಳಿತ ನಿರ್ವಹಣೆ ಕುರಿತು ನಗರದ ಮಯೂರ ವ್ಯಾಲಿ ವ್ಯೂ ಹೊಟೇಲ್ನಲ್ಲಿ ಮಂಗಳವಾರ ನಡೆದ ರಾಜ್ಯ ಮಟ್ಟದ ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯವನ್ನೇ ಸ್ಥಾಪಿಸಿ ಸಹಕಾರ ಕ್ಷೇತ್ರದ ಮಹತ್ವವನ್ನು ತಿಳಿದು ಸಹಕಾರ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡಿದೆ. ಆ ನಿಟ್ಟಿನಲ್ಲಿ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ರಾಷ್ಟçದ ಅಭಿವೃದ್ಧಿಗೆ ಸಹಕಾರ ಕ್ಷೇತ್ರಗಳು ಸಹ ಪ್ರಮುಖ ಪಾತ್ರ ವಹಿಸುತ್ತಿದ್ದು, ಸಹಕಾರ ಕ್ಷೇತ್ರಗಳು ಕೃಷಿ, ತೋಟಗಾರಿಕೆ, ಪಶುಪಾಲನೆ ಸೇರಿದಂತೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿದೆ ಎಂದು ಮನು ಮುತ್ತಪ್ಪ ವಿವರಿಸಿದರು.
ಡಿಸಿಸಿ ಬ್ಯಾಂಕ್ನ ನಿರ್ದೇಶಕಿ ಜಲಜಾ ಶೇಖರ್ ಮಾತನಾಡಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಕಾಲ ಕಾಲಕ್ಕೆ ಅಪ್ಡೇಟ್ ಮಾಹಿತಿ ನೀಡುವ ಮೂಲಕ ಸಹಕಾರ ಸಂಘಗಳ ಬೆಳವಣಿಗೆಗೆ ಕೈಜೋಡಿಸಿರುವುದು ಶ್ಲಾಘನೀಯ ಎಂದರು.
ಹಾಸನ ಜಿಲ್ಲೆಯ ಸನ್ನದು ಲೆಕ್ಕಿಗರಾದ ಎಸ್.ವಿ. ಶಂಭುಲಿAಗಪ್ಪ ಆದಾಯ ತೆರಿಗೆ ಹಾಗೂ ಜಿಎಸ್ಟಿ ಕಟಾವಣೆ ಸಂಬAಧಿಸಿದAತೆ ಮಾಹಿತಿ ನೀಡಿದರು. ಜಿಡಿಸಿ ತರಬೇತಿ ಕೇಂದ್ರದ ನಿವೃತ್ತ ಪ್ರಾಂಶುಪಾಲೆ ಶ್ಯಾಮಲಾ ಅವರು ಸಿಬ್ಬಂದಿ ನೇಮಕಾತಿ ಬಗ್ಗೆ ಮಾತನಾಡಿದರು.
ಕೊಡಗು ಜಿಲ್ಲಾ ಸಹಕಾರ ಯೂನಿಯರ್ ಉಪಾಧ್ಯಕ್ಷ ಪಿ.ಸಿ. ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕರಾದ ರಮೇಶ್ ಚಂಗಪ್ಪ, ರವಿಬಸಪ್ಪ, ಪ್ರೇಮ ಸೋಮಯ್ಯ, ಪಿ.ಸಿ. ಅಚ್ಚಯ್ಯ, ಉಮೇಶ್ ಉತ್ತಪ್ಪ, ಕೃಷ್ಣಗಣಪತಿ, ಪಿ.ಬಿ. ಭರತ್, ಪಿ.ಬಿ. ಯತೀಶ್, ಕನ್ನಂಡ ಸಂಪತ್, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್, ಮಂಜುಳ ಇತರರು ಇದ್ದರು.