ಮಡಿಕೇರಿ, ಡಿ. ೨೯: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯ ನೋಂದಣಿ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರೆತಿದೆ.
೨೦೨೩ ರಲ್ಲಿ ಪದವಿ-ಡಿಪ್ಲೋಮಾ ಉತ್ತೀರ್ಣರಾಗಿ ೬ ತಿಂಗಳಾದರೂ ಸರ್ಕಾರಿ-ಖಾಸಗಿ-ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ hಣಣಠಿ://sevಚಿsiಟಿಜhugs.ಞಚಿಡಿಟಿಚಿಣಚಿಞಚಿ.gov.iಟಿ ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಪದವೀಧರರಿಗೆ ಪ್ರತಿ ತಿಂಗಳು ೩,೦೦೦ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ ೧೫೦೦ ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ೨ ವರ್ಷಗಳವರೆಗೆ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ ೧೮೦೦೫೯೯೯೯೧೮ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ (೦೮೨೭೨-೨೨೫೮೫೧) ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಉಮಾ ತಿಳಿಸಿದ್ದಾರೆ.