ಮಡಿಕೇರಿ, ಡಿ. ೨೯: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವು ತಾ. ೩೦ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ಪುಟ್ಟರಾಜು, ರೋಟರಿ ಸಂಸ್ಥೆಯ ಅಧ್ಯಕ್ಷೆ ಗೀತಾ ಗಿರೀಶ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎ.ಪಿ. ಧನಂಜಯ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ ಇತರರು ಪಾಲ್ಗೊಳ್ಳಲಿದ್ದಾರೆ.