ಸುಂಟಿಕೊಪ್ಪ: ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಮಂಡಲ ಪೂಜೋತ್ಸವದ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿಗೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು.

ಗಣಪತಿ ಹೋಮದೊಂದಿಗೆ ಕನ್ನಿಮೂಲ ಗಣಪತಿಗೆ ಎಳನೀರು ಅಭಿಷೇಕ, ಚಂಡೆಮೇಳ, ಶ್ರೀ ಅಯ್ಯಪ್ಪ ಸ್ವಾಮಿಗೆ ಪಂಚಾಮೃತ ಅಭಿಷೇಕ, ಲಕ್ಷಾರ್ಚನೆ, ಪಲ್ಲಪೂಜೆ ಬಿಲ್ವಪತ್ರೆ ಅರ್ಚನೆ, ತುಳಸಿಅರ್ಚನೆ, ದೂರ್ವಾರ್ಚನೆ ಇತ್ಯಾದಿಗಳು ನೆರವೇರಿದವು. ದೇವಸ್ಥಾನದ ಅರ್ಚಕರಾದ ಗಣೇಶ ಉಪಾಧ್ಯಾಯ ನೇತೃತ್ವದಲ್ಲಿ ಮಂಜುನಾಥ ಭಟ್, ರಾಘವೇಂದ್ರ ಭಟ್, ಮಹಾಭಲೇಶ್ವರ ಭಟ್, ಮನೋಜ್ ಭಟ್, ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ ದೇವಾಲಯದ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.ವೀರಾಜಪೇಟೆ: ಸಮೀಪದ ಆರ್ಜಿ ಗ್ರಾಮದ ಪೆರುಂಬಾಡಿಯಲ್ಲಿ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಅಯ್ಯಪ್ಪ ಮಂಡಲ ಪೂಜೆ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು.

ಗಣಪತಿ ಹೋಮ, ಎಳನೀರು ಅಭಿಷೇಕ, ಚಂಡೆಮೇಳ ಶ್ರೀ ಅಯ್ಯಪ್ಪ ಸ್ವಾಮಿಗೆ ಪಂಚಾಮೃತ ಅಭಿಷೇಕ, ಲಕ್ಷಾರ್ಚನೆ, ಪಲ್ಲಕ್ಕಿ ಪೂಜೆ ಮತ್ತು ಮಹಾಪೂಜೆಗಳು ನಡೆದು, ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಅರ್ಚಕ ಸುರೇಶ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆಗಳು ನೆರವೇರಿದವು.